ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಪ್ರತಿಭಟನೆ
ಕೋಲಾರ, ೨೫- ರಾಜ್ಯಾದ್ಯಂತವಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಜಾರಿ ಮಾಡಿಲ್ಲ
ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ ಕಾರ್ಮಿಕರ ಜೀವನ ಕಷ್ಟಕ್ಕೆ ಸಿಲುಕಿದೆ. ಶೈಕ್ಷಣಿಕ ಸಹಾಯಧನ ಬಿಡುಗಡೆಗಾಗಿ ನಾವು ಕೊನೆಗೆ ಹೈಕೋರ್ಟ್ ಮೆಟ್ಟಿಲಿಗೆ ಹೋಗಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರಕಾರಕ್ಕೆ ಕಟ್ಟಡ ಕಾರ್ಮಿಕರು ಕೇಳದಿದ್ದರೂ ಲ್ಯಾಪ್‌ಟಾಪ್, ವೈದ್ಯಕೀಯ ತಪಾಸಣೆ, ಪೌಷ್ಟಿಕಾಂಶ (ಆಯುರ್ವೇದ) ಕಿಟ್ ಗಳನ್ನು ಖರೀದಿಸಿ ಇದಕ್ಕಾಗಿ ಮಂಡಳಿಯ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ. ಖರೀದಿ ಮೇಲಿರುವ ಕಲ್ಯಾಣ ಮಂಡಳಿ ಉತ್ಸುಕತೆ, ಡಿಬಿಟಿ ಮೂಲಕ ಕಾರ್ಮಿಕರಿಗೆ ನೇರವಾಗಿ ಸಂದಾಯವಾಗುವ ಸೌಲಭ್ಯಗಳನ್ನು ಕೊಡಲು ನಿರಾಸಕ್ತಿ ಕಾಣುತ್ತಿದೆ. ನೋಂದಣಿ ಮತ್ತು ಮರುನೋಂದಣಿಗಾಗಿ ಸಲ್ಲಿಸಿಲಾದ ಅರ್ಜಿಗಳನ್ನು ಸಕಾರಣವಿಲ್ಲದೇ ರದ್ದುಗೊಳಿಸಲಾಗುತ್ತಿದೆ. ಇದು ಕಲ್ಯಾಣ ಮಂಡಳಿಗೆ ಕಾರ್ಮಿಕರ ಹಿತಾಸಕ್ತಿ ಮುಖ್ಯವಾಗಿಲ್ಲ, ಸಾಮಾಜಿಕ ಸುರಕ್ಷೆ ನೀಡುವ ಉದ್ದೇಶದಿಂದ ಸ್ಥಾಪಿಸಲಾದ ಕಲ್ಯಾಣ ಮಂಡಳಿಯ ಸದುದ್ದೇಶವು ಮಣ್ಣುಪಾಲಾಗಿದೆ. ಕಲ್ಯಾಣ ಮಂಡಳಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ, ಬಡಜನ ವಿರೋಧಿ ನಡೆಯನ್ನು ಕಟ್ಟಡ ಕಾರ್ಮಿಕರಾದ ನಾವು ಖಂಡಿಸುತ್ತೇವೆ ಸರಕಾರದ ಈ ನಡೆಯನ್ನು ಸರಿಪಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಶೈಕ್ಷಣಿಕ ಸಹಾಯಧನ ಸಂಬಂಧಿಸಿ ಹೊರಡಿಸಲಾಗಿದ್ದ ೨೦೨೩ರ ಅಧಿಸೂಚನೆಯನ್ನು ರದ್ದುಮಾಡಿ ಕರ್ನಾಟಕ ಹೈಕೋರ್ಟ ಆದೇಶದಂತೆ ಕನಿಷ್ಠ ಕಾಲೇಜು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ನೀಡಬೇಕು ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ ೩೧ ರವರೆಗೆ ವಿಸ್ತರಿಸಬೇಕು ನೋಂದಣಿ ಮತ್ತು ಮರು ನೋಂದಣಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾರಣವಿಲ್ಲದೇ, ಅರ್ಜಿ ಸಲ್ಲಿಕೆಯಲ್ಲಿನ ಸಣ್ಣಪುಟ್ಟ ದೋಷಗಳನ್ನೇ ಮುಂದುಮಾಡಿ ತಿರಸ್ಕರಿಸಲಾಗುತ್ತಿದೆ. ಇದು ನಿಲ್ಲಬೇಕು. ಅರ್ಜಿ ಸಲ್ಲಿಕೆಯಲ್ಲಿ ದೋಷವಿದ್ದರೂ ನೈಜ ಕಾರ್ಮಿಕರಾಗಿದ್ದಲ್ಲಿ ಅವರ ಅರ್ಜಿಯನ್ನು ಮಾನ್ಯ ಮಾಡಬೇಕು. ಹಾಗೂ ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೆಲವೆಡೆ ಬಿಲ್ಡಿಂಗ್ ಲೈಸನ್ಸ್ ಸಲ್ಲಿಸದಿರುವ ಕಾರಣವನ್ನು ಮುಂದು ಮಾಡಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಭೀಮರಾಜ್, ವಿಜಯಕೃಷ್ಣ, ಪ್ರಭಾಕರ್, ಆಶಾ, ಶಿವಣ್ಣ, ಕೃಷ್ಣಮೂರ್ತಿ, ಪ್ರವೀಜ್ ತಾಜ್, ನವೀನ್ ಕುಮಾರ್ ಮುಂತಾದವರು ಇದ್ದರು
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಹೊಂದಾಣಿಕೆ ಮಾಡಲು ಅಭಿವೃದ್ದಿ ಹಣವನ್ನು ದುರ್‍ಬಳಿಸಿ ಕೊಂಡು ಅಗತ್ಯ ವಸ್ತುಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡುತ್ತಿದೆ ಎಂದು ಟೀಕಿಸಿದರು,
ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಪ್ರಸ್ತಾವಿಕ ನುಡಿಗಳಾಡಿದರು,
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಗಳು ಹಿಂಪಡೆಯಲು ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು,
ಪ್ರತಿಭಟನೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕರಾದ ವೈ.ಸಂಪಂಗಿ. ಬಿ.ಪಿ.ವೆಂಕಟಮುನಿಯಪ್ಪ. ಎಂ.ನಾರಾಯಣಸ್ವಾಮಿ. ಶಿಡ್ಲಘಟ್ಟ ರಾಜಣ್ಣ, ಮುಖಂಡರಾದ ಸಿ.ಎಂ.ಆರ್. ಶ್ರೀನಾಥ್, ಎಸ್.ಬಿ.ಮುನಿವೆಂಕಟಪ್ಪ, ಬಣಕನಹಳ್ಳಿ ನಟರಾಜ್, ಕೃಷ್ಣಮೂರ್ತಿ, ಹನುಮಂತಪ್ಪ, ಪ್ರವೀಣ್ ಗೌಡ, ವಿಜಯಕುಮಾರ್, ಹಾರೋಹಳ್ಳಿ ವೆಂಕಟೇಶ್, ವಡಗೂರು ರಾಮು, ವಿಜಯಕುಮಾರ್, ಸಿ.ಡಿ.ರಾಮಚಂದ್ರ, ಮಹೇಶ್, ಕೆಂಬೋಡಿ ನಾರಾಯಣಸ್ವಾಮಿ, ಮಂಜುನಾಥ್, ವೆಂಟೇಶ್‌ಪತಿ, ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮುದುವಾಡಿ ಮಂಜು, ಬಾಬು, ಓಹಿಲೇಶ್, ರಾಜೇಶ್ ಸಿಂಗ್, ರಾಕೇಶ್‌ಗೌಡ, ಮುಂತಾದವರು ಭಾಗವಹಿಸಿದ್ದರು,