ಜು.1 ರಿಂದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ಹೊರಡಿಸಿದ್ದೆ
ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ.ಜೂ.30:- ಜು.1 ರಿಂದ ಪಟ್ಟಣದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ನೋಟಿಸ್ ಜಾರಿಯಾಗಲಿದ್ದು ದಂಡ ಪಾವತಿಸಬೇಕಾಗುವುದು ಎಂದು ಸಿಪಿಐ ಜಿ.ಕೆ.ರಾಘವೇಂದ್ರ ತಿಳಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪೆÇಲೀಸ್ ಇಲಾಖೆಯಿಂದ ಬುಧವಾರ ಸಾರ್ವಜನಿಕರಿಗೆ ಮಾದಕ ವ್ಯಸನಗಳ ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು. ವಾಹನ ಸವಾರರು ಸಂಚಾರ ನಿಯಮದಂತೆ ಡ್ರೈವಿಂಗ್ ಲೈಸನ್ಸ್, ಇನ್ಸೂರೆನ್ಸ್, ಆರ್ ಸಿ ಪುಸ್ತಕ ಸೇರಿದಂತೆ ಕನಿಷ್ಠ ದಾಖಲೆಗಳನ್ನು ತಮ್ಮ ವಾಹನಗಳಲ್ಲಿ ಇಟ್ಟುಕೊಂಡಿರಬೇಕು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಕಾರು ಮತ್ತಿತರ ಲಘು ಮೋಟಾರ್ ವಾಹನಗಳನ್ನು ಚಾಲನೆ ಮಾಡುವವರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿರಬೇಕು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದು ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ಕಂಡುಬಂದಲ್ಲಿ ವೃತ್ತದಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾಗಳಲ್ಲಿ ಸಂಚಾರ ನಿಯಮ ಉಲ್ಲಂಘನೆಗಳು ದಾಖಲೆಯಾಗಲಿದ್ದು ವಾಹನಗಳ ಮಾಲೀಕರಿಗೆ ದಂಡ ಪಾವತಿಸುವಂತೆ ನೇರವಾಗಿ ನೋಟಿಸ್ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು. ರಾಜ್ಯ ಸರ್ಕಾರ ಜುಲೈ 1 ರಿಂದ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ಹೊರಡಿಸಿದ್ದು ಸಂಚಾರ ನಿಯಮದ ಉಲ್ಲಂಘನೆಯಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಮೈಕ್ ಮೂಲಕ ಎಚ್ಚರಿಕೆ ನೀಡಿದರು. ಸಾರ್ವಜನಿಕರು ತಮ್ಮ ವಾಹನ ಚಾಲನೆಯ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ತಪ್ಪಿದಲ್ಲಿ ದಂಡ ತೆರಲು ಸಿದ್ದರಾಗಿರಬೇಕು ಎಂದು ಸೂಚನೆ ನೀಡಿದರು.
ಅಪ್ರಾಪ್ತರಿಗೆ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲದವರಿಗೆ ವಾಹನಗಳನ್ನು ಚಾಲನೆಗೆ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು ವಾಹನಗಳ ಮಾಲೀಕರೇ ಶಿಕ್ಷೆ ಹಾಗೂ ದಂಡಕ್ಕೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸಿ ಬಸವೇಶ್ವರ ವೃತದಲ್ಲಿ ಮಾನವ ಸರಪಳಿಯ ರಚಿಸಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಪಿಎಸ್‍ಐ ಗಳಾದ ಪ್ರದೀಪ್ ಕುಮಾರ್, ಸುರೇಶ್, ಪೆÇಲೀಸ್ ಇಲಾಖೆ ಸಿಬ್ಬಂದಿಗಳಾದ ನಾರಾಯಣ ಶೆಟ್ಟಿ, ಅಣ್ಣಯ್ಯ, ನವೀನ್, ಸಂಜಯ್, ವನಿತಾ, ಅಶ್ವಿನಿ, ಈರಣ್ಣ, ಗಣೇಶ್, ವಿನಾಯಕ ಸೇರಿದಂತೆ ಮತ್ತಿತರರು ಇದ್ದರು