ನಿಗಮದ ಭ್ರಷ್ಟಾಚಾರದ ಖಂಡಿಸಿ ಬಿಜೆಪಿ ಮುತ್ತಿಗೆ, ಬಂಧನ
ಸಂಜೆವಾಣಿ ನ್ಯೂಸ್
ಮೈಸೂರು.ಜೂ.30:- ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ನಗರದ ಸಿದ್ಧಾರ್ಥನಗರದಲ್ಲಿರುವ ಹಳೆ ಹಾಲಿನ ಡೈರಿ ಮುಂಭಾಗ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ನಂತರ ಕಾಲ್ನಡಿಗೆ ಮೂಲ ಜಿಲ್ಲಾಧಿಕಾರಿ ಕಚೇರಿವರೆಗೂ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೆÇಲೀಸರು ಜಿಲ್ಲಾಧಿಕಾರಿ ಕಚೇರಿ ಗೇಟ್ ಬಂದ್ ಮಾಡಿ ಅಡ್ಡಲಾಗಿ ನಿಂತರು.ಒಳನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ತಳ್ಳಾಟ ನೂಕಾಟ ನಡೆಯಿತು. ಪರಿಸ್ಥಿತಿ ಕೈ ಮೀರುವುದನ್ನು ಅರಿತ ಪೆÇಲೀಸರು ಪ್ರತಿಭಟನಕಾರರನ್ನು ಬಂಧಿಸಿದರು.
ಶಾಸಕ ಶ್ರೀವತ್ಸ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಪರಿಶಿಷ್ಟ ಪಂಗಡದ ಬಡವರ 187 ಕೋಟಿ ರೂ.ಗಳ ಅನುದಾನವನ್ನು ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ತೆಲಂಗಾಣ ಚುನಾವಣೆಗೆ ಬಳಸಿಕೊಂಡಿರುವ ಅನುಮಾನವಿದೆ. ಇದಕ್ಕೆ ಸಾಕ್ಷಿಯಂತೆ ತೆಲಂಗಾಣದ ಕಾಂಗ್ರೆಸ್ ಮುಖಂಡನ ಮನೆಯಲ್ಲಿ 30 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿತು. ಈ ಪ್ರಕರಣದಲ್ಲಿ ನಿಗಮದ ಅಧ್ಯಕ್ಷರ ತಲೆದಂಡ ಹಾಗೂ ಅಧಿಕಾರಿಯ ಜೀವ ಬಲಿಯಾಗಿದೆ. ಆದರೆ, ಇದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ಹಾಗೂ ಬಿಜೆಪಿ ನಗರ ಅಧ್ಯಕ್ಷರೂ ಆದ ಎಲ್.ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ತಮ್ಮ ಪುಕ್ಕಟ್ಟೆ ಗ್ಯಾರಂಟಿಗಳ ಅನುಷ್ಠಾನಕ್ಕೆ ನಿಗಮ ಮಂಡಳಿಗಳ ಮತ್ತು ಪರಿಶಿಷ್ಟ ವರ್ಗದವರ ಹಣವನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಮುಖ್ಯಮಂತ್ರಿಗಳೇ ಹಣಕಾಸಿನ ನಿರ್ವಹಣೆ ನೋಡಿಕೊಳ್ಳುತ್ತಿದ್ದು, ಅವರ ಕಣ್ಣು ತಪ್ಪಿಸಿ ಈ ರೀತಿ ಹಗರಣ ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ರಾಜ್ಯ ಎಸ್‍ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೋಟೆ ಕೃಷ್ಣನಾಯಕ, ಮೈಲ್ಯಾಕ್ ಮಾಜಿ ಅಧ್ಯಕ್ಷ ಫಣೀಶ್, ವಕ್ತಾರ ಮಹೇಶ್, ನಗರ ಎಸ್‍ಟಿ ಮೋರ್ಚಾ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ, ಬಿ.ಎಂ.ರಘು, ಗಿರಿಧರ್, ಆರ್.ಸೋಮಶೇಖರ್, ಮುದ್ದುಕೃಷ್ಣ, ಚಿಕ್ಕರಂಗನಾಯಕ ಉದ್ಭೂರು ಉಮೇಶ್, ಮಾಜಿ ಉಪಮೇಯರ್ ಶೈಲೇಂದ್ರ, ಮಹೇಶ್ ರಾಜೇ ಅರಸ್, ಲೋಹಿತ್, ರಾಕೇಶ್, ಮಹೇಶ್ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದರು.