ಡಿಹೆಚ್‍ಒ ಕಚೇರಿ: ಸಭಾಭವನ ರೂಫಿಂಗ್ ಕಾಮಗಾರಿಗೆ ಚಾಲನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೩೦; ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಭ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದ ಕಟ್ಟಡದ ಮೇಲ್ಭಾಗದಲ್ಲಿ ಸಭಾಭವನ ರೂಫಿಂಗ್ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಅಭಿನವ್, ಡಾ.ನಾಗರಾಜ್, ಡಾ.ಚಂದ್ರಶೇಖರ್ ಕಾಂಬ್ಳಿಮಠ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಸಹಾಯಕ ಆಡಳಿತಾಧಿಕಾರಿ ಗವಿಸಿದ್ದೇಶ್ವರ್ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.