ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ (SUP) ತಯಾರಿಕೆಅಥವಾ ಬಳಸುವುದು ಕಂಡುಬಂದಲ್ಲಿ ಜಪ್ತಿ ಮಾಡಿ ಕ್ರಿಮಿನಲ್ ಮೊಕದ್ದಮೆ
ಕಲಬುರಗಿ:ಜೂ.29:ಕರ್ನಾಟಕ ಸರ್ಕಾರವು ದಿನಾಂಕ: 11-03-2016 ರಿಂದ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿದೆ. ಸಾರ್ವಜನಿಕರು, ಉದ್ದಿಮೆದಾರರು ಮತ್ತು ವ್ಯಾಪಾರಸ್ಥರು ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ (SUP) ತಯಾರಿಕೆ ಅಥವಾ ಬಳಸುವುದು ಕಂಡುಬಂದಲ್ಲಿ ಇದನ್ನು ಜಪ್ತಿ ಮಾಡಿ ಅವರ ವಿರುದ್ಧ ದಂಡ ಹಾಗೂ ಕ್ರಿಮಿನಲ್ ಮೊಕದಮ್ಮೆಯನ್ನು ದಾಖಲಿಸಲಾಗುತ್ತದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ನಗರದ ಸಾರ್ವಜನಿಕರು, ಉದ್ದಿಮೆದಾರರು ಮತ್ತು ವ್ಯಾಪಾರಸ್ಥರು ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು (SUP) ತಯಾರಿಕೆ ಅಥವಾ ಬಳಸದೇ ಬಟ್ಟೆ ಅಥವಾ ಪರ್ಯಾಯ ಚೀಲ/ವಸ್ತುಗಳನ್ನು ಬಳಸಬೇಕು.
ಕರ್ನಾಟಕ ಸರ್ಕಾರವು ದಿನಾಂಕ: 11-03-2016 ರಿಂದ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಿದೆ. ಅವುಗಳೆಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೇಕ್ಸ್, ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‍ಗಳು, ಪ್ಲಾಸ್ಟಿಕ್ ಸ್ಪೂನ್‍ಗಳು, ಅಂಟಿಕೊಳ್ಳುವ ಫಿಲ್ಮ್‍ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‍ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮಣಿಗಳಿಂದ ವಸ್ತುಗಳನ್ನು ನಿಷೇಧಿಸಲಾಗಿದೆ.
ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಒoಇಈ ಮತ್ತು ಅಅ) ನವದೆಹಲಿ ಇವರು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021 ರಲ್ಲಿ ಮೇಲಿನ ನಿಷೇಧಿತ ಉತ್ಪನ್ನಗಳ ಜೊತೆಗೆ ಕೆಳಗಿನ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟೀಕ್ ಉತ್ಪನ್ನಗಳನ್ನು ನಿಷೇಧಿಸಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು, 2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ). “ಪಾಲಿಸ್ಟ್ರೆರೀನ್ ಮತ್ತು ವಿಸ್ತರಿತ ಪಾಲಿಸ್ಟ್ರೆರೀನ್ ಸೇರಿದಂತೆ ಏಕ ಬಳಕೆ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.