ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಲಬುರಗಿ:ಜೂ.29:ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 1 ರಂದು ಸೋಮವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು. ಕಲಬುರಗಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿಯ ಕೆ.ಕೆ.ಆರ್.ಡಿ.ಬಿ. ಕಚೇರಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು.