ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಪ್ರವಾಸ
ಕಲಬುರಗಿ:ಜೂ.29:ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಇವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 1 ರಂದು ಸೋಮವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಸಚಿವರ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಭವನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಫಾಲ್ಗೊಳ್ಳುವರು. ಸಂಜೆ 7.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.