ನಮೋಶಿಯವರಿಗೆ ವಿಪಕ್ಷ ನಾಯಕ ಸ್ಥಾನ ನೀಡಲು ಕಲ್ಯಾಣಪ್ಪ ವಾಗ್ದೇರೆ ಮನವಿ
ಕಲಬುರಗಿ,ಜೂ.29-ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿಯವರಿಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕನಾಗಿ ಸ್ಥಾನ ನೀಡುವುದರ ಮೂಲಕ ಪಕ್ಷದ ವರಿಷ್ಠರು ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಬಿಜೆಪಿ ಮುಖಂಡ, ನ್ಯಾಯವಾದಿ ಹಾಗೂ ಅಖಿಲ ಭಾರತ ಕಲ್ಯಾಣಪ್ಪ ವಾಗ್ದೇರೆ ಮನವಿ ಮಾಡಿದ್ದಾರೆ.
ಈ ಹಿಂದೆಯೂ ಕೂಡ ನಮೋಶಿಯವರು ಜಿಲ್ಲಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿ, ರಾಜ್ಯ ವಕ್ತರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಪಕ್ಷ ಕಟ್ಟುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಆಗಿರುವ ನಮೋಶಿ ಅವರು, ಪಕ್ಷದ ಎಲ್ಲ ಕಾರ್ಯಕರ್ತರ, ಮುಖಂಡರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ವಿಧಾನಪರಿಷತ್ತಿನ ಪಕ್ಷ ನಾಯಕರನ್ನಾಗಿ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.