ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು : ಶಾಸಕ ಕಾಶಪ್ಪನವರ್
ಇಲಕಲ್ಲ :ಜೂ.29: ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಶಾಸಕ ವಿಜಯಾನಂದ ಕಾಶಪ್ಪನವರ್ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ಮಿತಿ ಕೇಂದ್ರ ಮತ್ತು ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುನಗುಂದ್ ಇವರ ಸಂಯುಕ್ತ ಆಶ್ರಯದಲ್ಲಿ ಇಳಕಲ್ ತಾಲೂಕಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ 2023 24ನೇ ಸಾಲಿನ ಡಿಎಂಎಫ್ ಅನುದಾನದಡಿಯಲ್ಲಿ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್ ಗಳ ಉದ್ಘಾಟನಾ ಸಮಾರಂಭ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಈ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ರಿಬ್ಬನ್ ಕಟ್ ಮಾಡುವ ಮೂಲಕ ಸ್ಮಾರ್ಟ್ ಕ್ಲಾಸ್ ಗಳ ಕೊಠಡಿಗಳನ್ನ ಉದ್ಘಾಟನೆ ಮಾಡಿದರು. ಶಾಸಕರಿಗೆ ಡಿ ಡಿ ಪಿಐ ತಾಲೂಕ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾದರು.
ಉದ್ಘಾಟನಾ ಪರ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುವುದರೊಂದಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನ ಮಾಡುವ ಮೂಲಕ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡುವ ಸರ್ಕಾರ ನಮ್ಮದಾಗಿದೆ.
ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನ ಪ್ರವೇಶ ಪಡೆಯಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ, ಆ ಮನೋಭಾವನೆ ಹೋಗಬೇಕು, ಸರ್ಕಾರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ, ಅಲ್ಲದೆ ಇಂಥ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನ ಕಲಿಯಲು ಬೇಕಾದ ಸಾಮಗ್ರಿಗಳನ್ನು ಸರ್ಕಾರವೇ ನೀಡುತ್ತಿದೆ. ಹೀಗಾಗಿ ನಮ್ಮ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನ ನೀಡುವಂತ ಆಗಬೇಕು, ಎಲ್ಲ ಮಕ್ಕಳು ಸರ್ಕಾರಿ ಶಾಲೆಯ ಗಮನಹರಿಸಬೇಕು, ಆ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸದಾ ನನ್ನ ಬೆಂಬಲ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿಡಿಪಿಐ ಬಿ ಕೆ ನಂದನೂರು, ಕ್ಷೇತ್ರ, ಶಿಕ್ಷಣಾಧಿಕಾರಿ ಜಾಸ್ಮಿನ ಕೀಲ್ಲೆದಾರ್, ತಾಲೂಕಾ ದಂಡಾಧಿಕಾರಿ ಸತೀಶ್ ಕೂಡಲಗಿ,ಮುಖಂಡರಾದ ಶರಣಪ್ಪ ಆಮದಿಹಾಳ,ವಿಜಯಮಹಾಂತೇಶ ಗದ್ದನಕೇರಿ, ಸುರೇಶ ಜಂಗ್ಲಿ, ಅರುಣ್ ಬಿಜ್ಜಲ, ರೇಷ್ಮಾ ಮಾರನಬಸರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರಕಾರಿ ನೌಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಶಿಕ್ಷಣ ಸಂಯೋಜಕರು, ವಿವಿಧ ಶಾಲೆಯ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.