ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಖಂಡಿಸಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ. 29- ರಾಜ್ಯ ಸರ್ಕಾರದ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಗಳ ಅವ್ಯವಹಾರ ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಯತ್ನಿಸಿದ 100ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿ, ನಂತರ ಬಿಡುಗಡೆ ಗೊಳಿಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಯಸುಂದರ್, ಮಾಜಿ ಶಾಸಕ ಎಸ್. ಬಾಲರಾಜು ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ಹೊರಟರು. ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತದ ಭವನದ ಮುಖ್ಯ ದ್ವಾರಕ್ಕೆ ತಲುಪಿದರು. ಮೆರವಣಿಗೆ ಉದ್ದಕ್ಕು ಕಾಂಗ್ರೆಸ್ ಸರ್ಕಾರದ ವಿರುದ್ದ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ವಿರುದ್ದ ಘೋಷಣೆ ಕೂಗಿದರು.
ಮುಖ್ಯಗೇಟ್‍ಗೆ ಬೀಗ: ಬಿಜೆಪಿ ಪ್ರತಿಭಟನೆ ಹಾಗು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕುವ ವಿಚಾರ ತಿಳಿದ ಪೊಲೀಸರು ಜಿಲ್ಲಾಡಳಿತ ಭವನಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನುಗ್ಗದಂತೆ ಮುಖ್ಯ ದ್ವಾರದ ಗೇಟ್‍ಗಳಿಗೆ ಬೀಗ ಜಡಿದು ಪೋಲೀಸ್ ಬಂದೋಬಸ್ತ್ ಮಾಡಿದ್ದರು. ಇದನ್ನು ನೋಡಿ ಆಕ್ರೋಶಗೊಂಡ ಪ್ರತಿಭಟನಗಾರರು ರಸ್ತೆಯಲ್ಲಿಯೇ ಕುಳಿದು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ನಂತರ ಭವನಕ್ಕೆ ನುಗ್ಗಲು ಮುಂದಾದ ಬಿಜೆಪಿ ಜಿಲ್ಲಾಧ್ಯಕ್ಷ ಉಪಾಧ್ಯಕ್ಷ ಎನ್. ಮಹೇಶ್, ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ಮಾಜಿ ಶಾಸಕ ಎಸ್. ಬಾಲರಾಜು, ಎಸ್ಟಿ ಮೋರ್ಚಾ ರಾಜ್ಯ ಕಾಂiÀರ್iದರ್ಶಿ ಜಯಸುಂದರ್ ಸೇರಿದಂತೆ ಅನೇಕರನ್ನು ಬಂಧಿಸಿದರು.
ಸಿಎಂ. ರಾಜೀನಾಮೆಗೆ ಆಗ್ರಹ : ಇದಕ್ಕು ಮುನ್ನಾ ಪ್ರತಿಭಟನಾರಕನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಉಪಾದ್ಯಕ್ಷ ಎನ್. ಮಹೇಶ್, ಇದೊಂದು ಅತ್ಯಂತ ಭ್ರಷ್ಟ ಹಾಗೂ ಕೆಟ್ಟ ಸರ್ಕಾರ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂವಿಧಾನವನ್ನು ಸೋಲಿಸಿದೆ. ಆದರೇ, ರಾಹುಲ್‍ಗಾಂಧಿ ಸಂಸತ್ ಸಂವಿಧಾನ ಪರ ಘೊಷಣೆ ಕೂಗುವುದು ದುರಂತಯೇ ಸರಿ. ಎಸ್ಸಿ, ಎಸ್ಟಿಗಳ ಅರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಮೀಸಲಿಟ್ಟಿರುವ ಹಣವನ್ನು ಸಾಮಾನ್ಯ ಯೋಜನೆಗಳಿಗೆ ಅಂದರೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿಕೊಂಡಿರುವುದು ಸಂವಿಧಾನ ವಿರೋಧಿ ನೀತಿಯಾಗಿದೆ ಎಂದು ದೂರಿದರು.
ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ಸಿಗರು ಹಿಂದಿನದಿಂದಲು ಮೋಸ ಮಾಡುತ್ತಾ ಬಂದಿದ್ದಾರೆ. ರಾಹುಲ್ ಗಾಂಧಿ ಅವರೇ ನಿಮ್ಮ ಮುತ್ತತಾತ ಜವಹಾಲ್ ನೆಹರು, ಅಜ್ಜಿ ಇಂದಿರಾಗಾಂಧಿ, ಅಪ್ಪ ರಾಜೀವ್‍ಗಾಂಧಿ, ಅವ್ವ ಸೋನಿಯಾಗಾಂಧಿಯಿಂದಲೂ ಸಂವಿಧಾನ ರಕ್ಷಣೆಯಾಗಲಿಲ್ಲ. ಇನ್ನು ನಿಮ್ಮದ ಸಾಧ್ಯವೇ? ನಾವು ಸಂವಿಧಾನ ರಕ್ಷಣೆ ಮಾಡುತ್ತಿದ್ದೇವೆ ಎನ್ನುವವರು ಮೊದಲು ಈ ಹಗರಣದ ಬಗ್ಗೆ ಮಾತನಾಡಲಿ. ತನಿಖೆ ನಡೆಸಲಿ. ಎಸ್ಸಿ, ಎಸ್ಟಿ ಹಣ ದುರಪಯೋಗ ವಾಗುವುದನ್ನು ತಡೆಯಲಿ. ಕಾಂಗ್ರೆಸ್ ಸಂವಿಧಾನ ವಿರೋಧಿ ಎನ್ನುವ ಬಗ್ಗೆ ದೊಡ್ಡ ಆಂದೋಲವನ್ನು ಮಾಡುವುದಾಗಿ ಎಂದು ಎನ್. ಮಹೇಶ್ ಘೋಷಣೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಈ ಹಗರಣದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟರೇ ಸಾಲದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಈ ಸರ್ಕಾರ ವಿರುದ್ದ ಬಿಜೆಪಿ ನಿರಂತರ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮುಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಚಾಮುಲ್ ಅಧ್ಯಕ್ಷ ನಾಗೇಂದ್ರ, ನಿಶಾಂತ್ ಹನೂರು, ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ಉಪಾಧ್ಯಕ್ಷರಾದ ಮಂಗಲ ಶಿವಕುಮಾರ್, ನಾಗಶ್ರೀ ಪ್ರತಾಪ್, ಅರಕಲವಾಡಿ ನಾಗೇಂದ್ರ, ಹನುಮಂತಶೆಟ್ಟಿ, ನಗರ ಸಭೆ ಮಾಜಿ ಅಧ್ಯಕ್ಷ ಸುರೇಶ್ ನಾಯಕ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ನಗರ ಮಂಡಲದ ಅಧ್ಯಕ್ಷ ಶಿವರಾಜು, ಎಸ್ಟಿ ಮೋರ್ಚಾದ ಟೌನ್ ಅಧ್ಯಕ್ಷ ಬಸವರಾಜು, ಚಂದ್ರು, ಬಂಗಾರನಾಯಕ, ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಮನೋಜ್‍ಕುಮಾರ್, ಎಸ್ಸಿ ಮೋರ್ಚಾದ ಅಧ್ಯಕ್ಷ ಮೂಡಹಳ್ಳಿ ಮೂರ್ತಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ.ಆರ್. ಲೋಕೇಶ್, ಕಾರ್ಯದರ್ಶಿ ನಟರಾಜು, ರಾಜ್ಯ ಎಸ್ಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ, ಮುಖಂಡರಾದ ನೂರೊಂದು ಶೆಟ್ಟಿ, ಓಬಿಸಿ ಮೋರ್ಚಾ ಪುನೀತ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಲೆಯೂರು ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಗ್ರಾಮಾಂತರ ಮಂಡಲದ ಅಧ್ಯಕ್ಷ ಮಹೇಶ್ವರಿ, ವಜಾನಾಕ್ಷಿ, ದಾಕ್ಷಾಯಿಣಿ, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಸೂರ್ಯಬಾಲರಾಜು, ಆನಂಧ್ ಭಗೀರಥ್, ಮಹೇಶ್, ಕೂಸಣ್ಣ, ಶಂಕರಣ್ಣ, ಅನಿಲ್, ಯಳಂದೂರು ಮಹೇಶ್, ಚಿಕ್ಕಾಟಿ ಶಿವಣ್ಣ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ರಮೇಶ್ ನಾಯಕ, ಮಾಧ್ಯಮ ಪ್ರಮುಖ್ ವಿರೇಂದ್ರ, ಕಾರ್ಯದರ್ಶಿ ರಾಜು, ಇತರರು ಇದ್ದರು.