ಬದಲಾಗುವ ಜಗತ್ತಿನಲ್ಲಿ ಸಾಹಿತ್ಯದ ಬದಲಾವಣೆ ಬಹುಮುಖ್ಯ: ಕುಲಪತಿ ತುಲಸಿಮಾಲಾ
ಕಲಬುರಗಿ:ಜೂ.28: ಬದಲಾಗುವ ಜಗತ್ತಿನಲ್ಲಿ ಸಾಹಿತ್ಯದ ಬದಲಾವಣೆ ಬಹುಮುಖ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲಾ ಅವರು ಹೇಳಿದರು.
ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಶರನಬಸವ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡ ಆಧುನಿಕ ಕನ್ನಡ ಕಾವ್ಯ ಧಾರೆಗಳು ಕುರಿತ ಎರಡು ದಇನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ತಾಂತ್ರಿಕ ಯುಗದಲ್ಲಿ ಜಗತ್ತು ಬದಲಾಗುತ್ತಿದೆ ಇಂತಹ ಸಂದರ್ಭದಲ್ಲಿ ಸಾಹಿತ್ಯವು ಸಹಬದಲಾಗಬೇಕು ಎಂದರು.
ಕಾರ್ಯಕ್ರಮದ ಸ್ಮರಣ ಸಂಚಿಕೆಯನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ. ಎಸ್.ಜಿ. ಡೊಳ್ಳೆಗೌಡರ್ ಅವರು ಬಿಡುಗಡೆ ಮಾಡಿದರು. ಶಾಸ್ತ್ರೀಯ ಅಧ್ಯಯನ ಕೇಂದ್ರ, ಕೇಂದ್ರೀಯ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಬಿ.ಬಿ. ಪೂಜಾರ್ ಅವರು ಕಾರ್ಯಕ್ರಮದ ಆಶಯ ನುಡಿಗಳನ್ನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರು ಮಾತನಾಡಿ, ಇಂದಿನ ಸ್ಪರ್ಧಾಯುಗದಲ್ಲಿ ಹೊಸ ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ. ಅನಿಲಕುಮಾರ ಪಟ್ಟಣ ಅವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಿನ್ಸಿಪಾಲ್ ಡಾ. ರಾಜೇಂದ್ರ ಕೊಂಡಾ, ಉಪ ಪ್ರಾಚಾರ್ಯೆ ಡಾ. ವೀಣಾ., ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಾಗೇಂದ್ರ ಮಸೂತಿ ಅವರು ಸ್ವಾಗತಿಸಿದರು. ಡಾ. ಕಲ್ಯಾಣರಾವ್ ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.