ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಜೂ.28:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಜೂನ್ 29 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಶಹಾಪೂರದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸಂಜೆ 6.30 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜೂನ್ 30 ರಂದು ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಜುಲೈ 1 ರಂದು ಮಧ್ಯಾಹ್ನ 2.30 ಗಂಟೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಭಾಗವಹಿಸುವರು. ಜುಲೈ 2 ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿಯಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 6.30 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸಂಜೆ 7.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.