ಎಲೆಕ್ಟ್ರೋಲ್ ಬಾಂಡ್ ಪ್ರಕರಣದಲ್ಲಿ ಮೋದಿ ಮೊದಲು ರಾಜೀನಾಮೆ ನೀಡಲಿ: ಸಚಿವ ಎಂ.ಬಿ. ಪಾಟೀಲ
ವಿಜಯಪುರ,ಸೆ.26:ಸುಪ್ರೀಂ ಕೋರ್ಟ್ ಎಲೆಕ್ಟ್ರೋಲ್ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಚಾಟಿ ಬೀಸಿದೆ. ಹಾಗಾಗಿ ಮೋದಿ ಮೊದಲು ರಾಜೀನಾಮೆ ನೀಡಬೇಕು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಆಗ್ರಹಿಸಿದ್ದಾರೆ.
ಹರಿಯಾಣ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪಿಎಂ ಮೋದಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿಚಾರ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದರು.
ಎಲೆಕ್ಟ್ರೋಲ್ ಬಾಂಡ್ ವಿಚಾರದಲ್ಲಿ ಮೋದಿ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
ಚುನಾವಣಾ ಬಾಂಡ್ ಗಳ ವಿಚಾರದಲ್ಲಿ ಪ್ರಧಾನಿ ಮೋದಿಯವರು ಕೂಡ ರಾಜೀನಾಮೆ ಕೊಡಬೇಕು.
ರಾಜ್ಯದಲ್ಲಿ ಬಿಜೆಪಿಯವರು ಏನೇನು ಅನಾಹುತ ಮಾಡಿದ್ದಾರೆಂದು ಮೋದಿಯವರಿಗೆ ಗೊತ್ತಿಲ್ಲ.
ಇಲ್ಲಿ ಬಿಜೆಪಿಯ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಈ ಬಗ್ಗೆ ಪ್ರಾಥಮಿಕ ತನಿಖೆಯೂ ಸಹ ಆಗಿಲ್ಲ ಎಂದು ಸಚಿವ ಪಾಟೀಲ ಕುಟುಕಿದರು.