ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಬಿ.ಎನ್ ಜಿಡ್ಡಿಮನಿ ಆಯ್ಕೆ
ಕೊಲ್ಹಾರ:ಸೆ.26: ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮ ಆಡಳಿತಾಧಿಕಾರಿ ಬಿ.ಎನ್ ಜಿಡ್ಡಿಮನಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.
ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.