ಮಕ್ಕಳು ಈ ದೇಶದ ಸಂಪತ್ತು:ಕೆ. ನಾಗಣ್ಣ ಗೌಡ
ಬೀದರ. ಜೂ. 28: ಮಕ್ಕಳು ಈ ದೇಶದ ಸಂಪತ್ತಾಗಿದ್ದು ಅವರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣ ಗೌಡ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೆಶನಾಲಯ ಬೆಂಗಳೂರು, ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಹಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆರ್.ಟಿ.ಇ. ಪೆÇೀಕ್ಸೊ ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆಯ ಅನುಷ್ಠಾನದ ಬಗ್ಗೆ ಸಹಭಾಗಿದಾರ ಇಲಾಖೆಯವರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಮುಖ್ಯವಾಗಿ 11 ಭಾಗಿದಾರಿ ಇಲಾಖೆಗಳ ಮೇಲಿದೆ. ಮಕ್ಕಳ ಜೀವ ಮತ್ತು ಜೀವನವನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ.
ಪೆÇೀಕ್ಸೊ, ಆರ್.ಟಿ.ಇ ಮತ್ತು ಭ್ರೂಣ ಹತ್ಯೆಯಂತಹ ಪ್ರಕರಣಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಇಂತಹ ಪ್ರಕರಣಗಳಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
ವಿವಿಧ ಇಲಾಖೆಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಅವರಿಗೆ ಭವಿಷ್ಯವನ್ನು ರೂಪಿಸಿದಂತಾಗುತ್ತದೆ. ಚೈಲ್ಡ ಪೆÇ್ರಟೆಕ್ಷನ್ ನಿಯಮಗಳ ಕುರಿತು ಶಿಕ್ಷಣ ಇಲಾಖೆಯ ಎಲ್ಲರಿಗೂ ತರಬೇತಿ ನೀಡಬೇಕು ಅಂದಾಗ ಅವರ ಹಕ್ಕುಗಳ ರಕ್ಷಣೆ ಮಾಡಲು ಸಾಧ್ಯವಿದೆ. ತರಬೇತಿ ನೀಡಿ ಮೂರು ದಿನಗಳಲ್ಲಿ ನಮಗೆ ಮಾಹಿತಿ ನೀಡಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಿಗೆ ಅಧ್ಯಕ್ಷರು ಸೂಚನೆ ನೀಡಿದರು.
ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯನ್ನು ಜಿಲ್ಲೆಯಲ್ಲಿ ಎಷ್ಟು ಪರೀಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಂದಲೂ ಮಾಹಿತಿ ಪಡೆದ ಅಧ್ಯಕ್ಷರು ಜಿಲ್ಲೆಯಲ್ಲಿ ಒಟ್ಟು 117 ಸ್ಕ್ಯಾನಿಂಗ್ ಕೇಂದ್ರಗಳಿವೆ ಇದರಲ್ಲಿ 103 ಕಾರ್ಯನಿರ್ವಹಿಸುತ್ತಿದ್ದು, ಸರಕಾರಿ 9 ಮತ್ತು 108 ಖಾಸಗಿ ಇವೆ. ಪ್ರತಿ ಮೂರು ತಿಂಗಳಿಗೊಮ್ಮೆ ಇದರ ಸಭೆ ನಡೆಸಲಾಗುತ್ತದೆ ಹಾಗೂ ಇಲ್ಲಿಯವರೆಗೆ 5 ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಬಾಲ ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಲು ಅವರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕಪೆÇೀರ್ಸ ಸಮಿತಿ ರಚಿಸಿ ಬಾಲ ಕಾರ್ಮಿಕರ ನಿರ್ಮೂಲನೆಗೆ ಒತ್ತು ನೀಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ಅವರಿಗೆ ಹೇಳಿದರು. ಸಮಾಜ ಕಲ್ಯಾಣ ಇಲಾಖೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಸಿಗಬೇಕು ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಮಹಿಳಾ ಮೇಲ್ವಿಚಾರಕರು ಸೇರಿದಂತೆ ಎಲ್ಲರಿಗೂ ಮಹಿಳೆಯರೆ ಇರುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳು ಬಿಕ್ಷಾಟನೆಯಲ್ಲಿ ತೊಡಗದಂತೆ ನೋಡಿಕೊಳ್ಳಬೇಕು. 18 ವರ್ಷ ಕೆಳಗಿನ ಮಕ್ಕಳು ವಾಹನ ಚಲಾಯಿಸದಂತೆ ನೋಡಿಕೊಳ್ಳಬೇಕು. ಬಹಳಷ್ಟು ಜನರು ದ್ವಿ- ಚಕ್ರ ವಾಹನಗಳಲ್ಲಿ 3 ಜನರು ಕುಳಿತು ಪ್ರಯಾಣ ಮಾಡುವುದು ಕಂಡು ಬರುತ್ತದೆ ಇಲ್ಲಿಯವರೆಗೆ ಇಂತಹ ಪ್ರಕರಣಗಳನ್ನು ಜಿಲ್ಲೆಯಲ್ಲಿ ಏನು ಕ್ರಮ ವಹಿಸಲಾಗಿದೆ ಮತ್ತು ಖಾಸಗಿ ಶಾಲಾ ವಾಹನಗಳಲ್ಲಿ ಮಕ್ಕಳಿಗೆ ಕರೆದುಕೊಂಡು ಹೋಗುತ್ತಾರೆ ಅವುಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಆ ವಾಹನಗಳಲ್ಲಿ ಕಡ್ಡಾಯವಾಗಿ ಒಬ್ಬ ಲೇಡಿ ಆಯಾ ಇರಬೇಕು ಇದ್ದಾರೆಯೆ ಎಂದು ಖಾತರಿಪಡಿಸಿಕೊಂಡು ಮಾಹಿತಿ ನೀಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗೆ ಅಧ್ಯಕ್ಷರು ಸೂಚನೆ ನೀಡಿದರು.
ಶಾಲೆಯ ಆವರಣದಲ್ಲಿ ಮಾಧಕ ವಸ್ತುಗಳ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿಯು ಮಕ್ಕಳು ಇದಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಬೀದರ ಜಿಲ್ಲೆ 2024 ರಲ್ಲಿ ದಾಖಲಾದ 22 ಪೆÇಕ್ಸೊ ಪ್ರಕರಣಗಳ ಮಾಹಿತಿಯನ್ನು ಪಡೆದು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಯಾವುದೇ ಪ್ರಕರಣಗಳು ಸಾರ್ವಜನಿಕರ ಗಮನಕ್ಕೆ ಬಂದರೆ ನಮ್ಮ ಆಯೋಗದ ಗಮನಕ್ಕೆ ತರಬಹುದಾಗಿದೆ ಆಯೋಗ ಇರುವುದೆ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಮಾತನಾಡಿ ನಮಗೆ ಗೊತ್ತಿಲ್ಲದ ಕೆಲವು ವಿಚಾರಗಳನ್ನು ಆಯೋಗದ ಅಧ್ಯಕ್ಷರು ನಮ್ಮ ಗಮನಕ್ಕೆ ತಂದಿದ್ದಾರೆ. ಇವುಗಳನ್ನು ಜಾರಿಯಲ್ಲಿ ತರಲಾಗುವುದು ಮತ್ತು ಇಂದಿನ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಸಹ ನೀಡಲಾಗುವುದು. ಆರ್.ಟಿ.ಇ ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು. ಎಲ್ಲಾ ಇಲಾಖೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರರ ನೇತೃತ್ವದಲ್ಲಿ ಟಾಸ್ಕಪೆÇೀರ್ಸ ಸಮಿತಿ ಸಭೆ ನಡೆಸಲು ಹಾಗೂ ಶಾಲೆಗಳು ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡುವಂತೆ ಅವರಿಗೆ ನಿರ್ದೆಶನ ನೀಡಲಾಗುವುದು ಎಂದು ಹೇಳಿದರು.
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ. ಜಿ, ಶಶಿಧರ ಕೋಸಂಬೆ, ಡಾ. ತಿಪ್ಪೆಸ್ವಾಮಿ. ಕೆ.ಟಿ., ವೆಂಕಟೇಶ. ಎಸ್., ಮಂಜು, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರ್ ಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರಾದ ರಜಿಯಾ ಬಳಬಟ್ಟಿ, ಹೆಚ್ಚುವರಿ ಪೆÇಲೀಸ್ ಅಧಿಕ್ಷಕರಾದ ಮಹೇಶ ಮೆಘಣ್ಣವರ, ಡಿವೈಎಸ್ಪಿ ಶಿವನಗೌಡ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗೌರಿ ಶಂಕರ ಪರತಾಪೂರ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.