ಬಸ್ ಪಾಸ್ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ಬೀದರ್ : ಜೂ.28:ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಿ ಹಾಗೂ ಬಸಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಮಾಡಿತು.
ನಗರದ ಡಾ ಬಿ. ಆರ್. ಅಂಬೇಡ್ಕರ್ ವೃತ್ತದಿಂದ, ಶಿವಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಆತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಬಸ್ ಪಾಸ್ ಒದಗಿಸುವ ಅವಶ್ಯಕತೆ ಇದೆ, ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಬಸ್ ಪಾಸ್ ಅನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿ ಇದೆ, ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ವಿತರಿಸುವಂತೆ ಹೇಮಂತ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾತನಾಡಿದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ. ಸರಕಾರ ಬಸ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು. ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ ಗಳ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಎಬಿವಿಪಿ ನಗರ ಸಹ ಕಾರ್ಯದರ್ಶಿ ಕುಮಾರಿ ಶಿವಾನೀ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತದೆ.
ಈ ಸಂದರ್ಭದಲ್ಲಿ ಸಾಯಿ ರಾಜ್ಯ ಕಾರ್ಯಕಾರಣಿ ಸದಸ್ಯ,ಪವನ್ ಕುಂಬಾರ,ನಾಗರಾಜ್ ಸುಲ್ತಾನ್ಪುರ ಕಾಲೇಜ್ ಕಾರ್ಯದರ್ಶಿಗಳು, ಅಭಿಷೇಕ್ ಶಂಬು ಎಬಿವಿಪಿ ತಾಲ್ಲೂಕು ಸಂಚಾಲಕ ಮಹೇಶ್, ಆನಂದ, ಸಾಯಿ ಕಿರಣ್, ಪವನ್ ಪದ್ಮಾಕರ್ ಹರೀಶ್ ಪ್ರಾರ್ಥನಾ ಸೌಮ್ಯ ಭುವನೇಶ್ವರಿ ಇನ್ನಿತ ವಿದ್ಯಾರ್ಥಿಗಳು ಕಾರ್ಯಕರ್ತರು ಸೇರಿದಂತೆ ಇತರರಿದ್ದರು