ಕೆಂಪೇಗೌಡ ಜಯಂತೋತ್ಸವ
ಸಂಜೆವಾಣಿ ವಾರ್ತೆ
ಹರಪನಹಳ್ಳಿ, ಜೂ.28 ತಾಲ್ಲೂಕು ಆಡಳಿತದಿಂದ ತಾಲ್ಲೂಕು ಪಂಚಾಯತ್ ರಾಜೀವ್ ಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಶ್ರೀ. ಕೆಂಪೇಗೌಡರ ಜಯಂತೋತ್ಸವವನ್ನು ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ‌ಪಿ.ಲತಾ ಮಲ್ಲಿಕಾರ್ಜುನ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿ ನಾಡಪ್ರಭು ಕೆಂಪೇಗೌಡರಿಗೂ ನಮ್ಮ ವಿಜಯನಗರ ಜಿಲ್ಲೆಯ ಹಂಪಿಗೂ ಇರುವ ಸಂಬಂಧವನ್ನು ಸ್ಮರಿಸಿದರು.
ಈ ವೇಳೆ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ ಜಿ.ವಿ ಗಿರೀಶ್ ಬಾಬು, ತಾ.ಪಂ ಇಒ ಚಂದ್ರಶೇಖರ್, ಪುರಸಭೆ ಮುಖ್ಯಾಧಿಕಾರಿ ಯರಗುಡಿ ಶಿವಕುಮಾರ್, ಪುರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು…
One attachment • Scanned by Gmail