ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಕ್ಷೇತ್ರ ಭೇಟಿ
ಸಂಜೆವಾಣಿ ವಾರ್ತೆ
ಹೊಸಪೇಟೆ (ವಿಜಯನಗರ) ಜೂನ್ 28: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಇತ್ತೀಚೆಗೆ ಗ್ರಾಮೀಣ ಪ್ರವಾಸ ಕೈಗೊಂಡು ಅಂಗನವಾಡಿಗಳಿಗೆ ಭೇಟಿ ನೀಡಿದರು.
ಹಡಗಲಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಟಿಕ ಆಹಾರ ಉತ್ಪಾದನೆ ಮತ್ತು ಸರಬರಾಜು ಮಾಡುವ ಹಡಗಲಿ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.
ಕೇಂದ್ರದಲ್ಲಿನ ಆಹಾರ ಪದಾರ್ಥಗಳ ದಾಸ್ತಾನು ಕಡತಗಳ ಮತ್ತು ಆಹಾರ ಪದಾರ್ಥಗಳ ಮಾದರಿಗಳನ್ನು ಪರಿಶೀಲಿಸಿ ಗುಣಮಟ್ಟದ ಆಹಾರವನ್ನು ಅಂಗನವಾಡಿ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ವೇತಾ ಎಸ್., ಜಿಲ್ಲಾ ನಿರೂಪಣಾ ಅಧಿಕಾರಿ ಸುಭದ್ರಾದೇವಿ, ಹಡಗಲಿ ಸಿಡಿಪಿಓ ರಾಮನಗೌಡ ಮತ್ತು ಘಟಕದ ಸಿಬ್ಬಂದಿ ಇದ್ದರು.