ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ
ಧಾರವಾಡ,ಜೂ28: ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಿಸುವಲ್ಲಿ ಕೆಂಪೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅಂದು ಅವರು ನಿರ್ಮಿಸಿದ ಬೆಂಗಳೂರು ನಗರ ಇಂದು ವಿಸ್ತಾರವಾಗಿ ಬೆಳೆದು ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಬೆಂಗಳೂರು ನಗರ ನಿರ್ಮಿಸಿದ ಕೆಂಪೇಗೌಡರ ಹೆಸರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗಿದ್ದು, ಕೆಂಪೇಗೌಡರ 108 ಅಡಿ ಪ್ರತಿಮೆಯ ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸಂತೋಷದಾಯಕ ವಿಚಾರವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ. ಬಬಲೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ನಡೆದ ಜಯಂತ್ಯೋತ್ಸವದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರು ನಮ್ಮ ನಾಡಿಗೆ ನೀಡಿದಂತ ಕೊಡುಗೆ ಅಪಾರವಾಗಿದೆ, 64 ಪೇಟೆ (ಮಾರ್ಕೆಟ್)ಗಳು, 10 ಕೆರೆಗಳು, ದೇವಾಲಯಗಳು, ಅನ್ನಛತ್ರಗಳು, ಶಿಕ್ಷಣ ಸಂಸ್ಥೆಗಳು ಹೀಗೆ ಹತ್ತು ಹಲವಾರು ರೀತಿಯಲ್ಲಿ ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆಸಿದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಲಘಟಗಿ ಗುಡ್ ನ್ಯೂಸ್ ಕಾಲೇಜಿನ ಪ್ರಾಚಾರ್ಯ ಡಾ. ಮಹೇಶ ಹೊರಕೇರಿ ಅವರು ಕೆಂಪೇಗೌಡರ ಜೀವನ, ಸಾಧನೆಗಳ ಕುರಿತು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಡಾ. ಡಿ.ಹೆಚ್.ಹೂಗಾರ, ಸಮಾಜದ ಮುಖಂಡರಾದ ಕೃμÉ್ಣೀಗೌಡರು, ಹಾಗೂ ಇತರರು, ವಿದ್ಯಾರ್ಥಿಗಳು, ಗಣ್ಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.