ಜನರ ಮನಸ್ಥಿತಿ ಬದಲಾಗಬೇಕು
ಧಾರವಾಡ,ಜೂ28: ದೇಶದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಜನ ಮಕ್ಕಳು, ಮಹಿಳೆ ವಿಷಯದಲ್ಲಿ ತಮ್ಮ ಮನೋಸ್ಥಿತಿ ಬದಲಾಯಿಸಿ ಕೊಳ್ಳುತ್ತಿಲ್ಲ. ಎಲ್ಲೆಡೆ ಮಕ್ಕಳು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅವರ ಮೇಲಿನ ಶೋಷಣೆ ತಪ್ಪುತ್ತಿಲ್ಲ. ಇದಕ್ಕೆ ಪರಿಹಾರವೆಂದರೆ ಜನರ ಮನಸ್ಥಿತಿ ಬದಲಾಗಬೇಕು. ಪರಸ್ಪರ ಪ್ರೀತಿ, ವಿಶ್ವಾಸ, ಗೌರವ ಹೆಚ್ಚಿಸುವ ಕಾರ್ಯಚಟುವಟಿಕೆಗಳು ಎಲ್ಲೆಡೆ ಮೂಡಿ ಬರಬೇಕು ಎಂದು ಪ್ರಭಾರ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರಾಜಕುಮಾರ ಸಿ. ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೆÇಲೀಸ್ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಪೆÇೀಕ್ಸೊ ಕಾಯ್ದೆ- 2012, ಬಾಲ್ಯ ವಿವಾಹ ನಿμÉೀಧ ಕಾಯ್ದೆ-2006 ಹಾಗೂ ಕರ್ನಾಟಕ ರಾಜ್ಯ ತಿದ್ದುಪಡಿ ಕಾಯ್ದೆ-2019, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಅನುμÁ್ಠನಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.
ಪೆÇೀಕ್ಸೊ ವಿಶೇಷ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ನೋಡಿದಾಗ, ಈ ಅಮಾನವೀಯ ಘಟನೆಗಳು ಜರುಗಲು ಅವರಲ್ಲಿ ಕಾನೂನು ಅರಿವಿನ ಕೊರತೆ ಸಹ ಕಾಣುತ್ತದೆ. ಮಕ್ಕಳಲ್ಲಿ ಪೆÇೀಕ್ಸೊ ಮತ್ತು ಬಾಲ್ಯ ವಿವಾಹ ನಿμÉೀಧ ಕಾನೂನುಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಅಸಹನೀಯ ಘಟನೆಗಳು ನಡೆದಾಗ ಯಾರನ್ನು, ಹೇಗೆ, ಎಲ್ಲಿ ಸಂಪರ್ಕಿಸಬೇಕು ಎಂಬ ತಿಳುವಳಿಕೆ ಮಕ್ಕಳಿಗೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಕಾರ್ಯಕ್ರಮ ರೂಪಿಸಿ, ಜಾರಿಗೊಳಿಸಬೇಕೆಂದು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಾನುನೂಗಳ ಉಚಿತ ನೆರವು ಮತ್ತು ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುತ್ತಿದೆ. ಆದರೂ ಸಹ ವಿಶೇಷವಾಗಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗುತ್ತಿಲ್ಲ. ಸಮುದಾಯದ ಸಹಕಾರದಿಂದ ಇಂತಹ ಅನಿಷ್ಟಗಳನ್ನು ತಡೆಗಟ್ಟಬಹುದು. ಸರಕಾರಿ ಇಲಾಖೆಗಳು ಹಾಗೂ ಸಮುದಾಯ ಸಂಘಟನೆಗಳು ಕೈ ಜೋಡಿಸಬೇಕೆಂದು ನ್ಯಾಯಾಧೀಶ ರಾಜಕುಮಾರ ಸಿ., ಅವರು ತಿಳಿಸಿದರು.
ಹುಬ್ಬಳ್ಳಿ ಎಸಿಪಿ ಎಸ್.ಟಿ.ಒಡೆಯರ ಅವರು ಅಧ್ಯಕ್ಷತೆವಹಿಸಿ ಮಾತನಾಡಿ, ವಿವಿಧ ಕಾನೂನುಗಳ ಅರಿವು ಅನುμÁ್ಠನ ಅಧಿಕಾರಿಗಳಿಗೆ ಅಗತ್ಯವಿದೆ. ಪೆÇೀಕ್ಸೊ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಿದೆ. ಶಾಲಾ ಕಾಲೇಜುಗಳಲ್ಲಿ ಪೆÇಲೀಸ ಇಲಾಖೆಯಿಂದ ಕಾನೂನು ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಸರ್ಕಾರಿ ಅಭಿಯೋಜಕಿ ಶೈಲಾ ಅಂಗಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಎಸ್.ಎಂ.ಹುಡೆದಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಪಿ.ಸುರೇಶ ಇದ್ದರು.