ಯುವ ಸಮೂಹಕ್ಕೆ ಸಮಸ್ಯೆಗಳ ಅರಿವಿನ ಕೊರತೆ
ಚಿಕ್ಕಬಳ್ಳಾಪುರ.ಜೂ.೨೮-ಯುವ ಸಮೂಹಕ್ಕೆ ಮಾದಕ ವಸ್ತುಗಳ ವ್ಯಸನದಿಂದ ಆಗುವ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆಗಳ ಅರಿವಿನ ಕೊರತೆಯಿದೆ. ಈ ಬಗ್ಗೆ ಅರಿವು ಮೂಡಿಸಿ ಸಮಾಜವನ್ನು ಮಾದಕ ವಸ್ತುಗಳ ಸೇವನೆಯಿಂದ ಮತ್ತು ಅಕ್ರಮ ಕಳ್ಳ ಸಾಗಣೆಯಿಂದ ಮುಕ್ತಗೊಳಿಸುವುದು ನಮ್ಮೆಲ್ಲರ ಗುರಿಯಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಅಧ್ಯಕ್ಷರಾದ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.
ತಾಲ್ಲೂಕಿನ ಅರೂರು ಬಳಿಯ ನಂದಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ, ಪಿಯುಸಿಯವರೆಗೂ ಪೋಷಕರ ನೆರಳಲ್ಲಿ ಬೆಳೆಯುವ ವಿದ್ಯಾರ್ಥಿಗಳು ನಂತರದ ಶಿಕ್ಷಣಕ್ಕಾಗಿ ಇಂಜನಿಯರಿಂಗ್, ಮೆಡಿಕಲ್ ಸೇರಿದಂತೆ ಹಲವಾರು ಕೋರ್ಸ್‌ಗಳಿಗೆ ಬೇರೆ ಕಡೆಗೆ ಬಂದು ಇರ ಬೇಕಾಗುತ್ತದೆ. ಅಂತಹ ಕೆಲ ವಿದ್ಯಾರ್ಥಿಗಳು ಮೊದಲು ಸಿಗರೇಟ್ ನಿಂದ ಆರಂಭಿಸಿ ನಂತರ ಮಾದಕ ವಸ್ತುಗಳ ಚಟಕ್ಕೆ ದಾಸನಾಗುತ್ತಾರೆ.ಈ ರೀತಿ ನಿಷಿದ್ದ ಮಾದಕವಸ್ತುಗಳಿಗೆ ದಾಸರಾಗುದನ್ನು ತಪ್ಪಿಸಿ ಕೊಳ್ಳುವ ಹೆಚ್ಚಿನ ಜವ್ದಾರಿ ವೈದ್ಯ ವಿದ್ಯಾರ್ಥಿಗಳ ಮೇಲಿದೆ ಎಂದರು.
ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ಎಂ.ಎಲ್. ಮಂಜುನಾಥ್ ಮಾತನಾಡಿ, ಕುಟುಂಬದ ಸದಸ್ಯರು ಒಂಟಿಯಾಗಿರುವುದನ್ನು ಬಿಟ್ಟು,ಮೊಬೈಲ್ ದೂರವಿಟ್ಟು ಪರಸ್ಪರ ಸೌರ್ಹಾಧತೆಯಿಂದ ಮಾತನಾಡಿ ಕೊಂಡಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗುವುದಿಲ್ಲಾ. ಡ್ರಗ್ ಸೇವನೆಯಿಂದ ವಿಪರೀತ ಕೆಟ್ಟ ಪರಿಣಾಮಗಳಾಗುತ್ತದೆ. ಇವು ಮನಸ್ಸನ್ನು ಛಿದ್ರಗೊಳಿಸುತ್ತವೆ . ಇದರಿಂದ ಮನೋರೋಗಗಳು ಉಂಟಾಗುತ್ತವೆ, ಎಂದು ವೈದ್ಯ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಎಚ್.ಕೆ.ಉಮೇಶ್ ಮಾತನಾಡಿ, ವಿದ್ಯಾವಂತರೇ ಅನೇಕ ಕಾರಣಗಳಿಂದ ಈ ಅಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ . ಡ್ರಗ್ ಸೇವನೆಯಿಂದ ಉಂಟಾಗುವ ಪರಿಣಾಮಗಳನ್ನು ಸೈಕೇಡಿಲಿಕ್ ಅನುಭವಗಳೆಂದು ಕರೆಯುತ್ತಾರೆ . ಇವುಗಳ ಸೇವನೆಯಿಂದ ಮನಸ್ಸಿನಲ್ಲಿ ಅಸಾಮಾನ್ಯ ಸ್ಪಷ್ಟ ಉತ್ಪನ್ನವಾಗುತ್ತದೆ . ಈ ಚಟಕ್ಕೆ ಒಂದು ಸಲ ಸಿಕ್ಕಿಬಿದ್ದರೆ ತಪ್ಪಿಸಿಕೊಳ್ಳುವುದು ಕಷ್ಟ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಶಿವಕುಮಾರ್,ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುಳ, ಮೆಡಿಕಲ್ ಕಾಲೇಜಿನ ಫಿಸಿಯಾಲಜಿ ವಿಭಾಗ ಮುಖ್ಯಸ್ಥ ಡಾ.ಸುರೇಶ್‌ನಾಯಕ್,ಡಾ.ಶಂಕರಪ್ಪ,ಡಾ.ಅರ್ಜುನ್ ಬಹದ್ದೂರ್, ಡಾ.ಅನಿತ,ಡಾ.ಸಂದೀಪ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಶಾಂತಿ, ಮನೋವೈದ್ಯರಾದ ಡಾ.ಜಿ.ಹೇಮಂತ್‌ಕುಮಾರ್,ಡಾ.ಎ.ಲಾವಣ್ಯ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಮುರಳಿ ಮೋಹನ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಶಿವಕುಮಾರ್,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್, ಮತ್ತಿತರರು ಇದ್ದರು.