ಕೆಂಪೇಗೌಡ ದೂರದೃಷ್ಟಿಯ ನಾಯಕ
ದೇವನಹಳ್ಳಿ.ಜೂ೨೮- ಕೆಂಪೇಗೌಡರ ದೂರದೃಷ್ಟಿ, ಸಮರ್ಥ ಹಾಗೂ ಜನಪರ ಆಡಳಿತ ನಮ್ಮಲ್ಲರಿಗೂ ಸದಾ ಪ್ರೇರಣೆ ಯಾಗಿರುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ೫೧೫ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ಗುರುವಾರದಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ
ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿನ ಚನ್ನಕೇಶವ ದೇವಾಲಯದಿಂದ ಜ್ಯೋತಿ ಹೊರಡಿಸಲು ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
-ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡರ ೫೧೩ನೇ ಜಯಂತಿಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಸ್ಥಾಯಿ ಸಮಿತಿ ಮಾಜಿ ಸದಸ್ಯರು ಕೆ.ಸಿ.ಮಂಜುನಾಥ್ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ, ಜಿ.ಪಂ. ಸಿಇಒ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರೀಗೌಡ, ಅಮರೇಶ್.ಎಚ್, ಶ್ರೀನಿವಾಸ್, ರಮೇಶ್.ಟಿ.ಕೆ. ಶಿವರಾಜ್, ಮುನಿರತ್ನಮ್ಮ ಮುನಿರಾಜು ಇತರರಿದ್ದರು.