ಮಂಗಲ ಪ್ರೌಢ ಶಾಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಸಂಜೆವಾಣಿ ವಾರ್ತೆ
ಹನೂರು ಜೂ 28 :- ತಾಲೂಕಿನ ಮಂಗಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೆಂಪೇಗೌಡ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೌರವ ಸಮರ್ಪಿಸಿದರು.
ಇದೇ ವೇಳೆ ಶಿಕ್ಷಕ ಶಂಭಯ್ಯ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರವನ್ನು ಕಟ್ಟಿ ಬೆಳೆಸಿದವರು ಅವರು ಹೋರಾಟ ಆದರ್ಶಗಳು ನಮ್ಮೆಲ್ಲರಿಗೂ ಮಾದರಿಯಾಗಬೇಕು. ವಿದ್ಯಾರ್ಥಿಗಳು ಕೆಂಪೇಗೌಡರ ಜೀವನ ಚರಿತ್ರೆ ಹೋರಾಟದ ಬಗ್ಗೆ ತಿಳಿದುಕೊಳ್ಳುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು.
ನಾಡಪ್ರಭು ಕೆಂಪೇಗೌಡರ ಕನಸಿನ ರಾಜಧಾನಿ ಇಂದಿಗೆ ತಂತ್ರಜ್ಞಾನದಲ್ಲಿ ವಿಶ್ವದ ಗಮನಸೆಳೆದಿದೆ. ಬೆಂಗಳೂರು ನಗರ ಕಟ್ಟಲು ಭೂಮಿಪೂಜೆಗೆ ರೈತ ಸಂಗಾತಿ ಹಸುಗಳ ಮೂಲಕ ನೆರವೇರಿಸಿದ್ದು ಸ್ಮರಣೀಯವಾಗಿದೆ ಇಲ್ಲಿ ದುಡಿಯುವ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂಬುದು ಸ್ಮರಣೀಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಮಹಾದೇವ್, ಸತೀಶ್, ಪ್ರಭುರಾಜು, ದೀಪ ಮತ್ತು ವೆಂಕಟೇಶ್ ಸೇರಿದಂತೆ ವಿಧ್ಯಾರ್ಥಿಗಳು ಇದ್ದರು.