ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು
ಕಲಬುರಗಿ,ಜೂ.27-ನಗರ ಪೆÇಲೀಸ್ ಆಯುಕ್ತಾಲಯ ವ್ಯಾಪ್ತಿಯ 10 ಕಾನೂನು ಸುವ್ಯವಸ್ಥೆ ಪೆÇಲೀಸ್ ಠಾಣೆಗಳ 27 ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರಾಷ್ಟ್ರೀಯ ದಿನ ಅಂಗವಾಗಿ ಪ್ರತಿಜ್ಞೆಯನ್ನು ಬೋಧಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಒಟ್ಟು 27 ಶಾಲಾ ಕಾಲೇಜುಗಳ 3650 ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಗರದ ಇಎಸ್‍ಐ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 900 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಪೆÇಲೀಸ್ ಆಯುಕ್ತರಾದ ಚೇತನ್ ಆರ್. ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.