ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಕಲಬುರಗಿ,ಜೂ.27-ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ.ದಂಡ ವಿಧಿಸಿದೆ.
4.2.2023 ರಂದು ಉತ್ತರ ಪ್ರದೇಶ ಮೂಲದ ಮೋನು ತಂದೆ ಗೋಮತಿ ಕುಸುಬಾ ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಐ ವಿಜಯಕುಮಾರ ಸಿನ್ನೂರ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ-ಎಫ್‍ಟಿಎಸ್‍ಸಿ-1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು.