ಅಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
ಚಿಟಗುಪ್ಪ;ಜೂ.27: ಮಳೆಗಾಲದಲ್ಲಿ ಜನರ ಆರೋಗ್ಯ ಕುರಿತು ಕಾಳಜಿ ವಹಿಸುವುದು ಅತ್ಯಂತ ಅವಶ್ಯಕವಾಗಿದೆ ಹೀಗಾಗಿ ವೈದ್ಯರು, ಪಿಡಿಒ ಅಧಿಕಾರಿಗಳು ಆಶಾ ಕಾರ್ಯಕರ್ತೆಯರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಲ್ಲ ಗ್ರಾಮಗಳಲ್ಲಿ ತಾವು ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬುಧವಾರ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸ್ವಚ್ಛತೆ ಕುರಿತು ಮೇಲಧಿಕಾರಿಗಳು ಪರಿಶೀಲನೆ ನಡೆಸಬೇಕು ವಿವಿಧ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಉದ್ಯೋಗ ಆಸಕ್ತರನ್ನು ಸೆಳೆಯುವ ಸಂಬಂಧ ಪ್ರಚಾರ ಕಾರ್ಯಕೈಗೊಳ್ಳಿ ಅಂಗನವಾಡಿ ಕಾರ್ಯಕರ್ತೆಯರು ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮವಾಗಿ ಪಾಲನೆ ಪೆÇೀಷಣೆ ಮಾಡಬೇಕು ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳು ನೀಡಬೇಕು. ಪಶುವೈದ್ಯಕೀಯ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಜನರನ್ನು ಪಶುಗಳ ಮತ್ತು ಮೀನು ಪಾಲನೆ ಪೆÇೀಷಣೆಗಾಗಿ ಇರುವ ಅನುದಾನ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಸರ್ಕಾರದ ಅನುದಾನ ಎಲ್ಲ ರೈತರಿಗೂ ತಲುಪಬೇಕು ರೈತರು ಅನುದಾನದ ಮಾಹಿತಿ ಕೊರತೆಯಿಂದ ಫಲಾನುಭವಿಗಳು ರೈತರು ವಂಚಿತರಾಗುತಿದ್ದಾರೆ ಈ ಕುರಿತು ಗಮನ ಹರಿಸಬೇಕು ಎಂದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಇನ್ನು ಎಲ್ಲಿ ವಿತರಣೆ ಆಗಿಲ್ಲವೊ ಕೃಷಿ ಇಲಾಖೆಯಿಂದ ಪೂರೈಸುವ ಬೀಜ, ಗೊಬ್ಬರದ ಕೊರತೆ ಆಗದಂತೆ ಕ್ರಮಹಿಸಬೇಕು. ರೈತರಿಗೆ ಸರ್ಕಾರದಿಂದ ಸಿಗುತ್ತಿರುವ ಬೆಳೆ ವಿಮೆ ಹಣ, ಕಿಸಾನ್ ಸಮ್ಮಾನ್ ಯೋಜನೆ, ಪರಿಹಾರ ಧನ ಇಡೀ ಕ್ಷೇತ್ರದ ಜನರು ಈ ಹಣ ಸಮರ್ಪಕವಾಗಿ ರೈತರ ಖಾತೆಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು. ಕ್ಷೇತ್ರದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಬೇಕು. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಕ್ಷೇತ್ರ ವಿಸ್ತರಿಸಲು ಶಾಸಕರು ಸೂಚಿಸಿದರು. ಮಕ್ಕಳ ಹಿತದೃಷ್ಟಿಯಿಂದ ಶಾಲಾ ಕಟ್ಟಡಗಳು ಪೂರ್ಣಗೊಳಿಸುವಂತೆ ಗುತ್ತೆದಾರರಿಗೆ ತಿಳಿಸಿ, ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಬಟ್ಟೆ, ಪುಸ್ತಕ, ಶೂ, ಗುಣಮಟ್ಟದ ಬಿಸಿ ಊಟ ನೀಡುವಂತೆ ಮುಖ್ಯ ಗುರುಗಳಿಗೆ ತಿಳಿಸಬೇಕು ಎಂದರು. ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಮೊದಲ ಆದ್ಯತೆ ಸ್ಥಳೀಯರಿಗೆ ನೀಡಿ ನೇಮಕಾತಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿ ಒಳ್ಳೆಯ ಅಭ್ಯರ್ಥಿಗೆ ಆಯ್ಕೆ ಮಾಡಿಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಎಲ್ಲ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಯ ಪ್ರಕರಣಗಳು ಕಂಡು ಬರದಂತೆ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವೈದ್ಯರು ಸಣ್ಣಪುಟ್ಟ ವಿಷಯಗಳಿಗೂ ತಾಲೂಕಿನ ಬಡ ರೋಗಿಗಳನ್ನು ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಕಳುಹಿಸುತ್ತಿರುವುದು ಬೇಸರದ ಸಂಗತಿ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು. ಬೀದರ್ ದಕ್ಷಿಣ ಕ್ಷೇತ್ರದ ಕೆಲವು ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ವೈದ್ಯರೆ ಇಲ್ಲ ಹೀಗಾದರೆ ಜನರು ಎಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರು ಪರಿಶೀಲಿಸಿ ಎಲ್ಲ ಜನರಿಗೆ ಉತ್ತಮ ಶುದ್ಧ ಕುಡಿಯುವ ನೀರು ಸರಬರಾಜು ಕುರಿತು ಪರಿಶೀಲನೆ ನಡೆಸಬೇಕು. ಯಾವ ಗ್ರಾಮದಲ್ಲಿ ಏನು ಸಮಸ್ಯೆ ಇದೆ ಎನ್ನುವ ಕುರಿತು ಸಭೆಯಲ್ಲಿ ಮುಕ್ತವಾಗಿ ಹೇಳಲು ಅವಕಾಶ ನೀಡಿದರು. ಬಳಿಕ ಸಾರ್ವಜನಿಕರಿಂದ ಅವಹಾಲುಗಳು ಸ್ವೀಕರಿಸಿ ಸಮಸ್ಯೆಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕನ್ನಡ ಸೇನೆ ಕಾರ್ಯಕರ್ತರು ಬಸ್ಸಿನ. ವ್ಯವಸ್ಥೆ ಸರಿವಿಲ್ಲದೆ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಹಾಗೂ ತಾಲೂಕ, ಸಮುದಾಯ ಆರೋಗ್ಯ ಆಸ್ಪತ್ರೆಗೆ ಹಳ್ಳಿಗಳಿಂದ ಹೋದ ಬಡ ರೋಗಿಗಳಿಗೆ ಒಳ್ಳೆಯ ಚಿಕಿತ್ಸೆ ನೀಡುತ್ತಿಲ್ಲಾ ಸಿಬ್ಬಂದಿಗಳು ಹಣ ನೀಡುವಂತೆ ರೋಗಿಗಳಿಗೆ ಹೇಳುತ್ತಿದ್ದಾರೆ ಇದರ ಬಗ್ಗೆ ಕ್ರಮ ಕೈಗೊಳುವಂತೆ ಕನ್ನಡ ಸೇನೆ ಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಡಾ. ರವಿ ಸ್ವಾಮಿ ನಿರ್ಣಾ ಅವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಪತ್ರ ನೀಡಿದರು. ಸ್ಥಳದಲ್ಲಿದ್ದ ಅಧಿಕಾರಿಗೆ ಯಾವ ಗ್ರಾಮದಲ್ಲಿ ಬಸ್ ವ್ಯವಸ್ಥೆ ಇಲ್ಲವೋ ಅಂತಹ ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಅರಣ್ಯ ಇಲಾಖೆ ಅಧಿಕಾರಿಗಳು ಮಳೆಗಾಲದಲ್ಲಿ ಸಸಿ ನೆಡುವುದನ್ನು ಹೆಚ್ಚಿಸಬೇಕು ಇದರಿಂದ ಮಳೆ ಬೆಳೆ ಉತ್ತಮವಾಗುತ್ತದೆ ಎಂದರು. ರಸ್ತೆ, ಶೌಚಾಲಯ, ಇನ್ನಿತರ ಕಟ್ಟಡ ಕಾಮಗಾರಿ ಉತ್ತಮವಾಗಿ ಶೀಘ್ರ ಪೂರ್ಣಗೊಳಿಸಬೇಕು ಎಂದರು. ಸಭೆಗೆ ಗೈರುರಾದ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಲು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು. ಸಭೆಗೂ ಪೂರ್ವದಲ್ಲಿ ಶಾಸಕರು ವಿವಿಧ ಗ್ರಾಮ ಪಂಚಾಯತಗಳಲ್ಲಿ ಕಸ ವಿಲೇವಾರಿಯ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರವೀಂದ್ರ ದಾಮಾ, ತಾಪಂ ಇಒ ಅಕ್ರಮ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.