ಜನಸ್ಪಂದನ ಕಾರ್ಯಕ್ರಮ
ಶಿರಹಟ್ಟಿ,ಜೂ.27: ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕೆಂಂದು ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು.
ಅವರು ಪಟ್ಟಣ ಸಾಮಥ್ರ್ಯ ಸೌಧದಲ್ಲಿ ನಡೆದ ಜನಸ್ಪಂಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಜನಸ್ಪಂದನ ಕಾರ್ಯಕ್ರಮವು ಕೇವಲ ವೇದಿಕೆ ಕಾರ್ಯಕ್ರಮಕ್ಕμÉ್ಟೀ ಸೀಮಿತವಾಗಬಾರದು. ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಮುಂದಿನ ಸಭೆಯ ಒಳಗಾಗಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಮುಂದಾಗಬೇಕು ಎಂದರು
ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತ ಅಹವಾಲುಗಳ ಅರ್ಜಿಗಳನ್ನು ಆದಷ್ಟು ಬೇಗ ಬಗೆಹರಿಸುವ ಮೂಲಕ ವಿಲೇವಾರಿ ಮಾಡಬೇಕು. ಕಾನೂನು ತೊಡಕು ಇರುವ ಅರ್ಜಿಗಳನ್ನು ಹೊರತುಪಡಿಸಿ ಉಳಿದ ಅರ್ಜಿಗಳನ್ನು ಬಾಕಿಯಿಟ್ಟುಕೊಳ್ಳಬಾರದೆಂದು ನಿರ್ದೇಶನ ನೀಡಿದರಲ್ಲದೆ ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಮಾತ್ರ ಜನರು ಸಮಸ್ಯೆಗಳಿಂದ ದೂರವಿರಲು ಸಾಧ್ಯ. ಎಂದು ಹೇಳಿದರು.
ಕಟ್ಟಡ ಕಾರ್ಮಿಕ ಇಲಾಖೆಯಿಂದ ಪಿಯುಸಿ ಪ್ರಥಮ ವರ್ಷ ಓದುತ್ತಿರುವ 11 ಕಾರ್ಮಿಕರ ಮಕ್ಕಳಿಗೆ ಹಾಗೂ ದ್ವೀತಿಯ ಪಿಯುಸಿ ಓದುತ್ತಿರುವ 9 ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ ಮಾಡಿದ್ದೇವೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮಾತನಾಡುತ್ತಾ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 6, ಭೂಮಾಪನ ಇಲಾಖೆಗೆ 16, ಸಮಾಜ ಕಲ್ಯಾಣ ಇಲಾಖೆಗೆ 04, ಕೃಷಿ ಇಲಾಖೆಗೆ 03, ಪಟ್ಟಣ ಪಂಚಾಯತ್‍ಗೆ 20, ಪೊಲೀಸ್ ಇಲಾಖೆಗೆ 04, ಶಿಕ್ಷಣ ಇಲಾಖೆಗೆ 02, ಕಾರ್ಮಿಕ ಇಲಾಖೆಗೆ 1, ಸಾರಿಗೆ ಇಲಾಖೆಗೆ 1, ಅಗ್ನಿಶಾಮಕ ಇಲಾಖೆಗೆ 1, ಆರೋಗ್ಯ ಇಲಾಖೆಗೆ 1, ಹೆಸ್ಕಾಂ ಇಲಾಖೆಗೆ 1 ಹಾಗೂ ತಾಲೂಕು ಪಂಚಾಯತ್‍ಗೆ 1, ಒಟ್ಟು 61 ಅರ್ಜಿಗಳು ಜನಸ್ಪಂಧನಾ ಕಾರ್ಯಕ್ರಮದಲ್ಲಿ ಸ್ವೀಕೃತಿಯಾಗಿವೆ. ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್, ಎಸ್ ಪಿ. ಬಿ ಎಸ್. ನೇಮಗೌಡ, ತಹಶೀಲ್ದಾರ ಅನೀಲ ಬಡಿಗೇರ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.