ಇಂಧನ ಬೆಲೆ ಏರಿಕೆ ಹಿಂಪಡೆಯಲು ಆಗ್ರಹ
ಸಂಜೆವಾಣಿ ವಾರ್ತೆ
ಬಳ್ಳಾರಿ, ಜೂ.27: ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್. ಡಿವೈಎಫ್ಎ ಬಳ್ಳಾರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲೆ ಹೆಚ್ಚಿಸಿರುವ ದರವನ್ನು ಕೂಡಲೇ ಹಿಂಪಡೆಯಬೇಕೆಂದು  ಒತ್ತಾಯಿಸಿ ಮಾನ್ಯ ಬಳ್ಳಾರಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ  ಮನವಿ.ಪತ್ರವನ್ನು ಕಳುಹಿಸಲಾಯಿತು
ಈ ಹೋರಾಟದ ನೇತೃತ್ವವಹಿಸಿದ್ದ ಡಿ.ವೈ.ಎಫ್.ಐ ಜಿಲ್ಲಾ ಅಧ್ಯಕ್ಷ ಯು. ಎರ್ರಿಸ್ವಾಮಿ ಮಾತನಾಡಿ, ಕರ್ನಾಟಕ ಸರ್ಕಾರದ  ಮುಖ್ಯಮಂತ್ರಿಗಳೇ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಬಳ್ಳಾರಿ ಜಿಲ್ಲಾ  ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಹಾಗೂ ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು  ರಾಜ್ಯದ .ಕರ್ನಾಟಕ ಸರಕಾರವು ಪೆಟ್ರೋಲ್‌ ಮತ್ತು ಡೀಜೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದಾಗಿ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ. 85 ರೂ 93 ಪೈಸೆಯಿದ್ದ ಡೀಸೆಲ್ ಬೆಲೆ 89 ರೂ. 20 ಪೈಸೆಗೆ ಏರಿಕೆಯಾಗಿದ್ದರೆ, 100 ರೂಪಾಯಿ ಇದ್ದ ಪೆಟ್ರೋಲ್ ದರ 103 ರೂ.ಗೆ ಹೆಚ್ಚಳಗೊಂಡಿದೆ.ಪೆಟ್ರೋಲ್, ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ. ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನತೆ ಸಂಕಷ್ಠವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ತೈಲ ಬೆಲೆ ಏರಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳಲ್ಲೂ ಮಾನ್ಯ ಮುಖ್ಯಮಂತ್ರಿಗಳು ಕೂಡಲೇ ಆದೇಶ ನೀಡಬೇಕು ಇಲ್ಲವಾದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಎ) ಸಂಘಟನೆಯ ನೇತೃತ್ವದಲ್ಲಿ ಜನತೆ ತೀವ್ರವಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸ್ವಾಮಿ ಎಲ್ಲಾ ಉಪಾಧ್ಯಕ್ಷ ಬೈಲಾ ಹನುಮಪ್ಪ ಜಿಲ್ಲಾ ಖಜಾಂಚಿ  ಬಿಪಿ ನವೀನ್ ಜಿಲ್ಲಾ ಕ್ರೀಡಾ ಅಧ್ಯಕ್ಷ  ಜಿ.ಎನ್ ಎರ್ರಿಸ್ವಾಮಿ ತಾಲೂಕ ಅಧ್ಯಕ್ಷ ಎತಿಪ್ಪೇರುದ್ರ ತಾಲೂಕು ಕಾರ್ಯದರ್ಶಿ ಎಚ್ ಎಱ್ರಿಸ್ವಾಮಿ ಮತ್ತಿತರರಿದ್ದರು.