ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡರ ಜಯಂತಿ
ಸಂಜೆವಾಣಿ ವಾರ್ತೆ
ಬಳ್ಳಾರಿ, ಜೂ.27:  ನಗರದ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿನ ಹೊಂಗಿರಣ ಸಭಾಂಗಣದಲ್ಲಿ ಇಂದು ನಾಡಪ್ರಭು ಕೆಂಪೆಗೌಡರ ಜಯಂತಿಯನ್ನು ಜಿಲ್ಲಾಡಳಿತ ಹಮ್ಮಿಕೊಂಡಿತ್ತು.
ಮೇಯರ್ ಮುಲ್ಲಂಗಿ ನಂದೀಶ್ ಅವರು ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್  ಅವರೊಂದಿಗೆ  ಕೆಂಪೆಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ.‌ಕೆಂಪೇಗೌಡರು ಬೆಂಗಳೂರು ನಿರ್ಮಣದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಗುರುರಾಜ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಮೊದಲಾದವರು ಇದ್ದರು.