ಕೆಕೆಆರ್‌ಟಿಸಿ ಡಿ.ಸಿ ಲೋಕಾಯುಕ್ತ ಬಲೆಗೆ
ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ27: ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್‌ ನಿರ್ವಾಹಕರೊಬ್ಬರಿಂದ ಬುಧವಾರ ಸಂಜೆ ಇಲ್ಲಿ 20 ಸಾವಿರ ಲಂಚ ಪಡೆಯುತ್ತಿದ್ದಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ)ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ (ಡಿ.ಸಿ) ವಿ.ಎಸ್‌.ಜಗದೀಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇಲಾಖಾ ವಿಚಾರಣೆಯನ್ನು ಕೈಬಿಡಲು ಡಿ.ಸಿ ಅವರು 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 5 ಸಾವಿರ ಮುಂಗಡವಾಗಿ ಪಡೆದಿದ್ದರು. ಉಳಿದ 20 ಸಾವಿರವನ್ನು ಇಲ್ಲಿನ ಕೆಕೆಆರ್‌ಟಿಸಿ ಬಸ್‌ ನಿಲ್ದಾಣದ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ದಾಳಿ ನಡೆಯಿತು. ನಗದು ಸಮೇತ ಡಿ.ಸಿ ಸಿಕ್ಕಿಬಿದ್ದರು ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ತಿಳಿಸಿದ್ದಾರೆ.
ಡಿವೈಎಸ್‌ಪಿ ಶೀಲವಂತ ಹೊಸಮನಿ ನೇತೃತ್ವದಲ್ಲಿ ಈ ದಾಳಿ ನಡೆಯಿತು.