ನಾಳೆ ಬಿಜೆಪಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಗೂ ಪ್ರತಿಭಟನೆ
ಬೀದರ: ಜೂ.27:ರಾಜ್ಯ ಸರ್ಕಾರದಿಂದ ವಾಲ್ಮೀಕಿ ನಿಗಮದಲ್ಲಿ ಆಗಿರುವ ಭಾರಿ ಅವ್ಯವಹಾರ ಹಗರಣದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ್ದ ವಿರುದ್ಧ ಇಂದು ದಿನಾಂಕ 28-06-2024 ರಂದು ಬೆಳಿಗ್ಗೆ 11.00 ಗಂಟೆಗೆ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಬೀದರ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಈ ಪ್ರತಿಭಟನೆಯು ಅಂಬೇಡ್ಕರ ವೃತ್ತದ ಹತ್ತಿರ ಇರುವ ಪ್ರವಾಸಿ ಮಂದಿರದಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿಗೆ ತಲುಪವುದು. ಈ ಪ್ರತಿಭಟನೆಯಲ್ಲಿ ಬೀದರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಭಾಗವಹಿಸಿ ಈ ಪ್ರತಿಭಟನೆ ಯಶಸ್ವ್ವಿಗೊಳಿಸಬೇಕೆಂದು ಭಾರತೀಯ ಜನತಾ ಪಾರ್ಟಿಯ ಬೀದರ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಮನವಿ ಮಾಡಿದ್ದಾರೆ.