ನಾಡಪ್ರಭು ಶ್ರೀಕೆಂಪೇಗೌಡ ಜಯಂತಿ
ಹುಬ್ಬಳ್ಳಿ,ಜೂ27: ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಭಾವಚಿತ್ರದ ಮೆರವಣಿಗೆಗೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ ಅವರು ಚಾಲನೆ ನೀಡಿದರು.
ಮೆರವಣಿಗೆಯು ತಾಲೂಕು ಆಡಳಿತ ಸೌಧದಿಂದ ಹೊರಟು ಅಂಬೇಡ್ಕರ್ ವೃತ್ತ, ಚನ್ನಮ್ಮ ವೃತ್ತ ತಲುಪಿ, ಬಳಿಕ ತಾಲೂಕು ಆಡಳಿತ ಸೌಧಕ್ಕೆ ಬಂದು ಕೊನೆಗೊಂಡಿತು. ಕನ್ನಡಪರ ಜಯಘೋಷಗಳನ್ನು ಕೂಗಲಾಯಿತು.
ಈ ಸಂದರ್ಭದಲ್ಲಿ ಅಪರ ತಹಶೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚನ್ನಪ್ಪಗೌಡ್ರ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಸಂಗಮೇಶ ಬಂಗಾರಿಮಠ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.