ಪೌರ ಕಾರ್ಮಿಕರು ನಿಜವಾದ ಕಾಯಕ ಯೋಗಿಗಳು : ರೂಪಾ ಕಾಂಬಳೆ
ಅಥಣಿ :ಸೆ.26: ಚಳಿ, ಗಾಳಿ, ಮಳೆ, ಬಿಸಿಲು ಎನ್ನದೆ, ಎಲ್ಲ ಕಾಲದಲ್ಲಿಯೂ ಸಹ ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಂಡಗಿಸಿಕೊಂಡ ಪೌರ ಕಾರ್ಮಿಕರು ನಿಜವಾದ ಕಾಯಕಯೋಗಿಗಳು ಮಾತ್ರವಲ್ಲದೇ ಸ್ವಚ್ಛತಾ ರೂವಾರಿಗಳು ಆಗಿದ್ದಾರೆ. ಅವರನ್ನು ಸಮಾಜ ಕೀಳಾಗಿ ಕಾಣಬಾರದು ಎಂದು ಭರವಸೆ ಬೆಳಕು ಫೌಂಡೇಶನ್ ಅಧ್ಯಕ್ಷ ರೂಪಾ ಕಾಂಬಳೆ ಹೇಳಿದರು.
ಅವರು ಪಟ್ಟಣದಲ್ಲಿರುವ ಭರವಸೆ ಬೆಳಕು ಫೌಂಡೇಶನ್ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರನ್ನ ಗೌರವಪೂರ್ವಕವಾಗಿ ಸನ್ಮಾನಿಸಿ ಮಾತನಾಡುತ್ತಿದ್ದರು.
ತಮ್ಮ ಜೀವದ ಹಂಗನ್ನು ತೊರೆದು ಬಿಡುವಿಲ್ಲದ ಪಟ್ಟಣದ ನೈರ್ಮಲೀಕರಣ ಕಾರ್ಯ ಮಾಡುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ. ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ಪಟ್ಟಣದ ಪೌರರು ಆರೋಗ್ಯದಿಂದಿರಲು ಸಾದ್ಯ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರನ್ನು ಎಲ್ಲರೂ ಅತ್ಯಂತ ಗೌರವ ಪ್ರೀತಿಯಿಂದ ಕಾಣುವಂತಾಗಬೇಕು. ಅವರು ಸದಾ ಸ್ಮರಣೀಯರು. ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದ ಅವರು ಪೌರ ಕಾರ್ಮಿಕರ ಶ್ರೋಯೋಭಿವೃದ್ಧಿಗೆ ಸರಕಾರ ಮತ್ತು ಸಂಘ, ಸಂಸ್ಥೆಗಳು ಮನಸ್ಸು ಮಾಡಬೇಕಿದೆ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಕಲಾವತಿ ಕಿತ್ತೂರ ಮಾತನಾಡಿ ಪೌರ ಕಾರ್ಮಿಕರು ತಮ್ಮ ಕಾಯಕವನ್ನು ಮನಪೂರ್ವಕವಾಗಿ, ಶ್ರದ್ಧೆಯಿಂದ ಮಾಡುತ್ತಾರೆ. ದೆuಟಿಜeಜಿiಟಿeಜಡ್ಡ ವ್ಯಕ್ತಿ ಮತ್ತು ಉನ್ನತ ಹುದ್ದೆಯಲ್ಲಿರುವವರನ್ನು ಸತ್ಕರಿಸುವುದು, ಗೌರವಿಸುವುದು ದೊಡ್ಡ ಕಾರ್ಯವಲ್ಲ. ಪೌರ ಕಾರ್ಮಿಕರಂತಹ ವ್ಯಕ್ತಿಗಳನ್ನು ಪ್ರತಿವರ್ಷ ಗೌರವಿಸುವುದು ಜನ ಮೆಚ್ಚುವ ಕಾರ್ಯವಾಗಿದೆ ಈ ನಿಟ್ಟಿನಲ್ಲಿ ಭರವಸೆ ಬೆಳಕು ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ಮಹಿಳಾ ಪೌರ ಕಾರ್ಮಿಕರ ಸನ್ಮಾನ ಹಾಗೂ ಉಡಿ ತುಂಬುವ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ ಈ ಸಂಸ್ಥೆಯ ಸಮಾಜ ಸೇವಾ ಕಾರ್ಯಗಳು ಮುಂದುವರಿಯಲಿ. ಇನ್ನೂ ಉತ್ತುಂಗಕ್ಕೆರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಾಜಕ್ತಾ. ಶೃತಿ. ಸವಿತಾ. ಲಕ್ಷ್ಮೀ. ದೀಪಾ. ಪ್ರೀತಿ. ಕಾದಂಬರಿ. ರೂಬಿನಾ. ಭಾರತಿ. ಜ್ಯೋತಿ. ಸ್ವಾತಿ. ಸುನಂದಾ. ರಾಜಶ್ರೀ. ಗೀತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.