ಎಬಿವಿಪಿ ವತಿಯಿಂದ ಬಸ ಪಾಸ್ ವಿಳಂಬ ಧೋರಣೆ ಆಗ್ರಹಿಸಿ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಔರಾದ :ಜೂ.27:ಶಾಲಾ ಕಾಲೇಜುಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇನ್ನೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ನೀಡಲು ವಿಳಂಬ ಧೋರಣೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪಟ್ಟಣದ ಕನ್ನಡಾಂಬೆ ವೃತ್ರದಲ್ಲಿ ಪ್ರತಿಭಟನೆ ನಡೆಸಿ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ, ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಅದರ ಜೊತೆಗೆ ಸರಿಯಾಗಿ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲಾ ತರಗತಿಗಳು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ, ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಬೇಕು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ತಿಂಗಳುಗಳ ಕಾಲ ಕಾಯುವಂತಾಗಿದೆ ಆದ್ದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಾರದಂತಾಗಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ವಿದ್ಯಾರ್ಥಿ ಮುಖಂಡ ಮಲ್ಲಿಕಾರ್ಜುನ ಟೆಕರಾಜ ಮಾತನಾಡಿ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ, ಸರ್ಕಾರ ಬಸ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುಬೇಕು, ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಿಎಸ್‍ಐ ಉಪೇಂದ್ರ, ಎಬಿವಿಪಿ ಮುಖಂಡರಾದ ಅನೀಲ ಮೇತ್ರೆ, ಅಶೋಕ ಶೇಂಬೇಳ್ಳಿ, ಅಂಬಾದಾಸ ನಳಗೆ, ಪ್ರಶಾಂತ ಔರಾದ, ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಇಂದ್ರಾಣಿ ಸಗರ, ಪೂಜಾ, ಗಾಯತ್ರಿ, ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪÁಲ್ಗೊಂಡಿದ್ದರು.