ಕೊಮ್ಮೇರಹಳ್ಳಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
ಸಂಜೆವಾಣಿ ವಾರ್ತೆ
ಮಂಡ್ಯ:ಜೂ. 27:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ,ವಿಶ್ವಮಾನವ ವಿದ್ಯಾ ಸಂಸ್ಥೆ, ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ ಸೇವಾ ಹಾಗೂ ಅರಣ್ಯ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಮಿಮ್ಸ್ ರೋಟರಿ, ಅನನ್ಯ ಹಾಟ್ರ್ಸ್,ಮಾನಸಧಾರ ಪುನರ್ವಸತಿ ಕೇಂದ್ರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ತಾಲ್ಲೂಕಿನ ಕೊಮ್ಮೆರಹಳ್ಳಿ ಗ್ರಾಮದ ವಿಶ್ವಮಾನವ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ-2024ರ ಕಾರ್ಯಕ್ರಮವು ಜರುಗಿತು.
ಕಾಲೇಜಿನ ಆಡಳಿತಾಧಿಕಾರಿ ಯೋಗಾನಂದ ರವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಜಿಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಎಂ. ಆನಂದ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಭಾರತದ ಭವಿಷ್ಯ ಯುವಜನರ ಮೇಲೆ ಅವಲಂಭಿಸಿದ್ದು ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಇಂತಹ ಮಾದಕ ವಸ್ತುಗಳ ಬಳಕೆ ಹಾಗೂ ಕಳ್ಳ ಸಾಗಾಣಿಕೆ ಮಾಡುವವರಿಗೆ ಕಾನೂನು ಅಡಿಯಲ್ಲಿ ನೀಡುತ್ತಿರುವ ಶಿಕ್ಷೆಯ ಬಗ್ಗೆ ಅರಿವು ಮೂಡಿಸಲು ಆ ಮೂಲಕ ಯುವಜನರನ್ನು ಸರಿ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳುವ ಉದ್ದೇಶದಿಂದ 1987 ರಿಂದ ಪ್ರತೀ ವರ್ಷ ಜೂನ್ 26 ರಂದು ಈ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ನಾವುಗಳು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಸದುಪಯೋಗ ಪಡೆಸಿಕೊಳ್ಳಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಸೋಮಶೇಖರ್,
ಆರಕ್ಷಕ ನಿರೀಕ್ಷಕ ದೇವರಾಜು ಮನೋವೈದ್ಯ ಡಾ.ಶಶಾಂಕ್ ಜಿಲ್ಲಾ ಸಲಹೆಗಾರ ತಿಮ್ಮರಾಜು,ಜಿಲ್ಲಾ ಅಬಕಾರಿ ಉಪ ಆಯುಕ್ತ, ಶಿವಶಂಕರ್ ಇದ್ದರು.
ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳ ಸೇವನೆಯ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.