ಶಿಕ್ಷಕರ ಅರ್ಹತಾ ಪರೀಕ್ಷೆ :ಪೂರ್ವಭಾವಿ ಸಭೆ
ಗದಗ, ಜೂ.26: ಜಿಲ್ಲೆಯಲ್ಲಿ ಜೂನ್ 30 ರಂದು ಜರುಗುವ ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿ ಇ ಟಿ) ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು. ಟಿಇಟಿ ಪರೀಕ್ಷೆಯು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿದ್ದು ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ, ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೆÇಲೀಸ ಬಂದೋಬಸ್ತ್, ಮಾರ್ಗಾಧಿಕಾರಿಗಳ ವಾಹನಕ್ಕೆ ಎಸ್ಕಾರ್ಟ ವ್ಯವಸ್ಥೆ , ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಡಯಟ್ ಪ್ರಾಚಾರ್ಯರಾದ ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.