ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೆÇೀನ್ ವಿತರಣೆ
ಸಂಜೆವಾಣಿ ವಾರ್ತೆ
ನಂಜನಗೂಡು:ಜೂ.26:- ತಾಲ್ಲೂಕಿನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಂಜನಗೂಡು ಮತ್ತು ವರುಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೆÇೀನ್ ವಿತರಣಾ ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೆÇೀನ್ ವಿತರಣೆ ಮಾಡಿದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ದರಾಮಯ್ಯ ಮಾತನಾಡಿ ರಾಜ್ಯದ್ಯಂತ ಅಂಗನವಾಡಿ ಕಾರ್ಯಕರ್ತೆಯರು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಡಿಮೆ ಗೌರವದನದಲ್ಲಿ ಹೆಚ್ಚು ಕೆಲಸ ಮಾಡುವ ಮತ್ತು ಜನರ ಸೇವೆ ಮಾಡುವ ಅವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಬೇಕು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರಿಗೆ ಇನ್ನಷ್ಟು ಸೌಲಭ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಮಾತನಾಡಿದರು.
ದೇಶ ಅಭಿವೃದ್ಧಿಯಾಗುತ್ತ ಹೊಸ ಹೊಸ ತಂತ್ರಜ್ಞಾನಗಳು ಸೃಷ್ಟಿಯಾಗುತ್ತವೆ ಅದಕ್ಕೆ ಅನುಗುಣವಾಗಿ ನಾವು ಕೂಡ ಹೈಟೆಕ್ ಚಲನವಲನಗಳಿಗೆ ಕೆಲಸ ಕಾರ್ಯಗಳಿಗೆ ಹೊಂದಿಕೊಳ್ಳಬೇಕು ಹಾಗೆ ಇಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೆÇೀನ್ ವಿತರಣೆ ಮಾಡುತ್ತಿರುವುದು ಸರ್ಕಾರಕ್ಕೆ ಅಭಿನಂದನೆ ತಿಳಿಸಿದರು. ನನ್ನ ಕಷ್ಟಕಾಲದ ಸಂದರ್ಭದಲ್ಲಿ ನನಗೆ ಕೈಹಿಡಿದು ಆತ್ಮಸ್ಥೈರ್ಯ ಹೇಳಿ ಇಂದು ಶಾಸಕನಾಗಿ ಈ ದಿನ ಮಾತನಾಡಲು ಅವಕಾಶ ಕಲ್ಪಿಸಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆ ತಾಯಂದಿರಿಗೆ ಅಭಿನಂದನೆ ಎಂದು ಶಾಸಕ ದರ್ಶನ್ ಮಾತನಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರ್, ಸುರೇಶ್, ಇಔ ಜೆರಾಲ್ಡ್ ರಾಜೇಶ್, ವಿಜಯ್ ಕುಮಾರ್ ಎಸ್. ಸಿ ಬಸವರಾಜ್, ರಂಗಸ್ವಾಮಿ, ಭವ್ಯಶ್ರೀ, ಮಂಜುಳಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.