ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್‌ಗಳ ಶ್ರಮ ಅಗತ್ಯ
ಕೋಲಾರ, ಜೂ.೨೬-ಕೇಂದ್ರ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಹಲವು ಸಾಲ ಮತ್ತು ಸಬ್ಸಿಡಿ ನೀಡುವ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಆರ್ಹ ಪಲಾನುಭವಿಗಳಿಗೆ ತಲುಪಲು ಬ್ಯಾಂಕ್ ಗಳು ಶ್ರಮವಹಿಸಬೇಕು ಎಂದು ಸಂಸದ ಎಂ.ಮಲ್ಲೇಶ್ ಬಾಬು ಕರೆ ನೀಡಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಸಾಲ ಯೋಜನೆಯ ಕೈಪಿಡಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.ಕೇಂದ್ರ ಸರ್ಕಾರವು ಮುದ್ರಾ, ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ, ರಾಷ್ಟ್ರೀಯ ಜಾನುವಾರು ಮಿಷನ್, ಪಿಎಂಎಫ್‌ಎಂಇ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಸಬ್ಸಿಡಿ ನೀಡುತ್ತಿದ್ದು, ಇವು ಅರ್ಹರನ್ನು ತಲುಪಲು ಬ್ಯಾಂಕ್ ಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.ಜಿ.ಪಂ ಸಿಇಓ ಪದ್ಮ ಬಸವಂತಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಲ ಮತ್ತು ಸಬ್ಸಿಡಿ ನೀಡುವ ಯೋಜನೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲು ಎಲ್ಲಾ ಬ್ಯಾಂಕ್‌ಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಗಳು ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸಲು ಅಗತ್ಯ ಸಾಲಗಳನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಬೆಳಗೆಳ ಅಭಿವೃದ್ದಿಗೆ ಬ್ಯಾಂಕ್ ಗಳು ಹೆಚ್ಚಿನ ಹಣಕಾಸಿನ ನೆರವನ್ನು ರೈತರಿಗೆ ನೀಡಬೇಕು. ಕೆಸಿಸಿ ಸಾಲಗಳನ್ನು ನಿಗದಿತ ಭೌತಿಕ ಗುರಿಯಂತೆ ತಪ್ಪದೇ ವಿತರಿಸಬೇಕು ಎಂದರು.
ಕೆನರಾ ಬ್ಯಾಂಕ್ ನ ಸಹಾಯಕ ಮಹಾ ಪ್ರಬಂಧಕ ಅಶೋಕ್ ಕುಮಾರ್ ಮಾತನಾಡಿ, ಜನರ ಜೀವನ ಮಟ್ಟ ಸುಧಾರಿಸಲು ಬ್ಯಾಂಕ್ ಗಳು ಕಾರ್ಯನಿರ್ವಹಿಸುವ ಅಗತ್ಯವಿದೆ. ಗೃಹ ಹಾಗೂ ಕೈಗಾರಿಕೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತನ್ನು ನೀಡುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಬ್ಬ ನಾಯಕ್ ಮಾತನಾಡಿ, ಜಿಲ್ಲಾ ಸಾಲ ಯೋಜನೆಯಂತೆ ಎಲ್ಲಾ ಬ್ಯಾಂಕ್ ಗಳು ನಿರ್ದಿಷ್ಟವಾಗಿ ಸಾಲ ವಿತರಿಸಬೇಕು ಎಂದರು.
ಕೃಷಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳಿಂದ ಸಾಕಷ್ಟು ಉದ್ಯೋಗವಕಾಶಗಳು ಸೃಷ್ಟಿಯಾಗಿರುವುದರಿಂದ ಆ ವಲಯಗಳತ್ತ ಹೆಚ್ಚಿನ ಸಾಲ ನೀಡುವ ಬಗ್ಗೆ ಬ್ಯಾಂಕ್ ಗಳು ಮುತು ವರ್ಜಿ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆರ್.ಬಿ.ಐ ಬ್ಯಾಂಕ್ ನ ಅಧಿಕಾರಿ ಶೀಲಾ ಪ್ರೀಯಾ ಗೌತಮ್, ನಬಾರ್ಡ್ ಬ್ಯಾಂಕ್ ನ ಅಧಿಕಾರಿ ಶಾರದ ಗೆಟ್ಲಾ, ಎಸ್‌ಬಿಐ ನ ಸಹಾಯಕ ಮಹಾ ಪ್ರಬಂಧಕ ಬಾಬು, ಆರ್ಸೆಟಿ ತರಬೇತಿ ಸಂಸ್ಥೆಯ ನಿರ್ದೇಶಕ ಯಲ್ಲೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.