ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ
ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.26 :ಜಿಲ್ಲೆಯ ಚಡಚಣದಲ್ಲಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬರಡೋಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿ ಒದಗಿಸಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಲಾ ತರಗತಿಗೆ ತೆರಳಿದ ಜಿಲ್ಲಾಧಿಕಾರಿ ಮಕ್ಕಳಿಗೆ ಪಾಠ ಮಾಡಿದರು. ಇದಲ್ಲದೆ ಮಕ್ಕಳೊಂದಿಗೆ ಸಂವಾದ ಕೂಡಾ ನಡೆಸಿದ ಅವರು, ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಂಡು ಶಿಕ್ಷಕರು ಹೇಳಿಕೊಡುವ ಪಾಠ ಮನನ ಮಾಡಿಕೊಂಡು ಕಲಿತ ಶಾಲೆಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಇತರ ಅಧಿಕಾರಿಗಳು ಉಸ್ಥಿತರಿದ್ದರು.