ಚಿಂಚೋಳಿ: ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ
ಚಿಂಚೋಳಿ: ಇದೇ ಜೂ. 26, ಮತ್ತು 27 ರಂದು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಮಠದಿಶರು ಗಣ್ಯರು ಆಗಮಿಸುತ್ತಿದ್ದಾರೆ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಶರಣು ಪಾಟೀಲ ಮೋತಕಪಳ್ಳಿ ತಿಳಿಸಿದ್ದಾರೆ.
ಪಟ್ಟಣದ ಹಾರಕೂಡ ಮಠದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂ.26ರಂದು ಬೆಳಿಗ್ಗೆ 7 ಗಂಟೆಗೆ ಭವ್ಯ ಮೆರವಣಿಗೆಯೊಂದಿಗೆ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಶ್ರೀಗಳನ್ನು ಭವ್ಯವಾಗಿ ಸ್ವಾಗತಿಸಲಾಗುವುದು.
ಆದೆ ದಿನ ಪಟ್ಟಣದ ಹಾರಕೂಡ ಚನ್ನಬಸವ ಶಿವಯೋಗಿಗಳ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 8 ಗಂಟೆಗೆ ಹಲವು ಮಠಾಧೀಶರ ಸಮ್ಮುಖದಲ್ಲಿ ಇಷ್ಟಲಿಂಗ ಪೂಜೆ, ಸಂಜೆ 4 ಗಂಟೆಗೆ ಧಾರ್ಮಿಕ ಸಭೆ ಜರುಗಲಿವೆ.
ಜೂ.27 ರಂದು ಬೆಳಿಗ್ಗೆ 8 ಗಂಟೆಗೆ ಜಂಗಮ ವಟುಗಳಿಗೆ ಅಯ್ಯಾಚಾರ, ಭಕ್ತರಿಗೆ ಲಿಂಗದೀಕ್ಷೆ, ಸಂಜೆ 4ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ಹಾರಕೂಡ ಚೆನ್ನವೀರ ಶಿವಾಚಾರ್ಯರು, ಕರುಣೇಶ್ವರ ಶಕವಾಚಾರ್ಯರು, ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಇತರ ಸ್ವಾಮಿಗಳು ಆಗಮಿಸುತ್ತಿದ್ದಾರೆ ಎಂದು ಹೇಳಿದರು.