ಪಂಡರಪುರ ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ
ಕಲಬುರಗಿ:ಜೂ.25: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ವಿಶೇಷವಾಗಿ ದೇವಸ್ಥಾನಕ್ಕೆ ಪ್ರತಿ ಹುಣ್ಣೆಮೆಯ ದಿನದಂದು ನಾನಾ ರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕಾಗಿ ಬರುತ್ತಾರೆ. ಬಂದಂತಹ ಭಕ್ತರು ತಮ್ಮ ಭಕ್ತಿ ಸೇವೆಯನ್ನು ಹಣದ ಮೂಲಕ ಸಂದಾಯ ಮಾಡುತ್ತಿದ್ದು, ಧಾರ್ಮಿಕ ದತ್ತಿ ಇಲಾಖೆಗೆ ಸರಿಯಾಗಿ ಪಾವತಿಯಾಗದೇ ಇರುವ ಕುರಿತು ಭಕ್ತಾಧಿಗಳು ದೂರು ನೀಡಿದ್ದು,
ಪ್ರತಿ ಹುಣ್ಣೆಮೆಯಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ ದೇವಾಲಯದ ವತಿಯಿಂದ ವಿಶೇಷ ದರ್ಶನಕ್ಕೆ ಪಾಳಿ ಪ್ರಕಾರ ರಸೀದಿಗಳನ್ನು ನೀಡಲಾಗುತಿದೆ ಕೆಲವು ಸಂದರ್ಭಗಳಲ್ಲಿ ಮಧ್ಯವರ್ತಿಗಳು ಕಂಡು ಬರುತ್ತಾರೆ ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೆÇೀಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಜರುಗಿಸಲು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.
ಪೆÇೀಲಿಸರು ತಮಗೆ ನೀಡಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಯಾವುದ ಕರ್ತವ್ಯ ಲೋಪ ಆಗದಂತೆ ಕ್ರಮವಹಿಸಬೇಕು ಎಂದರು.
ದೇವಸ್ಥಾನದ ಹುಂಡಿ ಪೆಟ್ಟಿಗೆಯ ಏಣಿಕೆ ಕಾರ್ಯವನ್ನು ದೇವಸ್ಥಾನದ ಸಿಬ್ಬಂದಿಗಳ ಬದಲಾಗಿ ಬ್ಯಾಂಕ್ ಸಿಬ್ಬಂದಿಗಳ ಮುಖಾಂತ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು
ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಆಫ್ರೀನ್, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ದೇವಾಲಯದ ಆರ್ಚಕರು, ತಾಲೂಕ ಪಂಚಾಯತ್ ಅಧ್ಯಕ್ಷರು, ಸಮಾಜದ ಮುಖಂಡರು ಭಾಗವಹಿಸಿದ್ದರು.