ಜೂ. 30 ರಂದು ನಡೆಯುವ ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಜೂ 25 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂನ್ 30 ರಂದು 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ನಿಯೋಜಿತ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಪರೀಕ್ಷೆಯ ಮೊದಲ ಪತ್ರಿಕೆಗೆ 4002 ಹಾಗೂ ಮಧ್ಯಾಹ್ನ ಪತ್ರಿಕೆಗೆ 6026 ಸೇರಿ ಒಟ್ಟು 10,028 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.