ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟ ಕಾಪಾಡಿ: ಶಾಸಕಿ ಎಂ.ಪಿ.ಲತಾ.
ಸಂಜೆವಾಣಿ ವಾರ್ತೆ ಹರಪನಹಳ್ಳಿ.ಜೂ.೨೫;ತಾಲೂಕಿನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಯೋಜನೆಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಗುಣ ಮಟ್ಟದಲ್ಲಿ ಮಾಡಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಗುತ್ತಿಗೆದಾರರಿಗೆ ತಾಕೀತು ಮಾಡಿದರು.ತಾಲೂಕಿನ ಚಿಗಟೇರಿ,ಸತ್ತೂರು, ತೆಲಿಗಿ ಗ್ರಾಮಗಳಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ರಸ್ತೆ, ಬ್ರಿಡ್ಜ್ ಮುಂತಾದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಕ್ಷೇತ್ರದಲ್ಲಿ ರಸ್ತೆ,ಚರಂಡಿ ಮುಂತಾದ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದ್ದು, ಶಾಲಾ ಕೊಠಡಿಗಳ ದುರಸ್ತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ಚಿಗಟೇರಿಯಲ್ಲಿ 2 ಕೋಟಿ ವೆಚ್ಚದಲ್ಲಿ ಆರು ನೂರು ಮೀಟರ ಉದ್ದ ಹಾಗೂ 4.50 ಮೀಟರ ಅಗಲಕ್ಕೆ ಸಿಸಿ ರಸ್ತೆ ಹಾಗೂ ರಸ್ತೆ ಎಡಬದಿಯಲ್ಲಿ ಸೇರಿ ಸಿಸಿ ಚರಂಡಿ ಹಾಗೂ ಪದವಿ ಪೂರ್ವ ಕಾಲೇಜಿಗೆ ಹೋಗುವ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು ಕೆಲಸ ನಡೆಯುತ್ತದೆ ಎಂದು ತಿಳಿಸಿದರು.ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ, ಪುರಸಭಾ ಸದಸ್ಯ ಲಾಟಿದಾದಾಪೀರ, ಮುಖಂಡರಾದ ಎಲ್.ಮಂಜನಾಯ್ಕ, ಯುವ ಕಾಂಗ್ರೆಸ್ ಅದ್ಯಕ್ಷ ಮತ್ತೂರು ಬಸವರಾಜ, ಎಇಇ ಪ್ರಕಾಶ ಪಾಟೀಲ್, ಎಇ ಮಲ್ಲಿಕಾರ್ಜುನ, ಸಾಸ್ವಿಹಳ್ಳಿ ನಾಗರಾಜ, ಸಂಪತ್ ಗೌಡ ಇತರರು ಉಪಸ್ಥಿತರಿದ್ದರು.