ಜನಸ್ಪಂದನ ಕಾರ್ಯಕ್ರಮ: ಅಹವಾಲು ಸ್ವೀಕಾರ
ಗದಗ,ಜೂ.25:ಎಲ್ಲಾ ಇಲಾಖೆಯ ಅಧಿಕಾರಿಗಳು ತಮಗೆ ಬಂದ ಅಹವಾಲುಗಳನ್ನು ನಿಷ್ಕಕಾಳಜಿ ತೊರದೆ ಶೀಘ್ರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಗದಗ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕಿನ ಸಾರ್ವಜನಿಕರಿಂದ ಅಹವಾಲು ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿಯ ಗದಗ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಭರತ್ ಎಸ್.
ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಹೆಚ್ಚುವರಿ ಪೆÇಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸಂಕದ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಗದಗ ತಾಲೂಕನಾದ್ಯಂತ 57ಅರ್ಜಿಗಳು ಬಂದವು ಕೆಲ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರೆಯಿತು.ಉಳಿದವುಗಳನ್ನು ನಿಯಮಾನುಸಾರ ಶೀರ್ಘ ವಿಲೇವಾರಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮವನ್ನು ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ ಸ್ವಾಗತಿಸಿದರು. ವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ ನಿರೂಪಿಸಿದರು.