ದಿವ್ಯ ಪ್ರಭು ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ
ಧಾರವಾಡ,ಸೆ26: ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಮತ್ತು ಚಿತ್ರದುರ್ಗ ಹಾಗೂ ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಾಗಿ ಉತ್ತಮವಾದ ಜನಸ್ನೇಹಿ, ನಾಗರಿಕಸ್ನೇಹಿ ಆಡಳಿತ ನೀಡಿರುವ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರಕಟವಾಗಿದೆ.