ಸ್ವಚ್ಛತಾ ಹೀ ಸೇವಾ ಅಭಿಯಾನ
ಬಾಗಲಕೋಟೆ,ಸೆ26: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಹಾಗೂ ಅಗ್ರಣೀಯ ಜಿಲ್ಲಾ ಕಾರ್ಯಾಲಯದ ಸಹಯೋಗದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಮುಚಖಂಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮತ್ತು ಸೆಕ್ಟರ ನಂ.25ರ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಕೆನರಾ ಬ್ಯಾಂಕಿನ ಉದ್ಯೋಗಿಗಳು ಮತ್ತು ಸಾರ್ವಜನಿಕರು ಸ್ವಚ್ಛತಾ ಕಾರ್ಯವನ್ನು ಶ್ರಮದಾನದ ಮೂಲಕ ಪ್ರಾರಂಭಿಸಿ ಸಸಿ ನೆಡುವ ಕಾರ್ಯವನ್ನು ನಡೆಸಲಾಯಿತು.
ಈ ಸಂದರ್ಭಧಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ಮುಖ್ಯಸ್ಥ ರಾಜಕುಮಾರ ಹೂಗಾರ ಸ್ವಚ್ಛತೆಯ ಸೇವಾ ಅಭಿಯಾನದ ಪ್ರಾಮುಖ್ಯತೆಯನ್ನು ತಿಳಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಎಂಎಸ್‍ಬಿವಯ್, ಪಿಎಂಜೆಜೆಬಿವಾಯ್ ಯೋಜನೆಯ ಅನುಕೂಲತೆಗಳ ಬಗ್ಗೆ ತಿಳಿಸಿದರು. ಕೆನರಾ ಬ್ಯಾಂಕಿನ ಕ್ಷೇತ್ರೀಯ ಸಹಾಯಕ ಪ್ರಬಂದಕ ಕೆ.ಆರ್.ಶೈಲಜಾ ಮಾತನಾಡಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಸದುಪಯೋಗಕ್ಕೆ ಕರೆ ನೀಡಿದರು.