ರಾಜ್ಯ ಮಟ್ಟಕ್ಕೆ ಆಯ್ಕೆ ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ:ಎಲ್.ಆರ್.ನಾಯಕ
ಸೈದಾಪುರ:ಸೆ.26:ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ತಾಯಮ್ಮ.ಎನ್ ಯಾದಗಿರಿ ಡಯಟ್‍ದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ
ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಮುಖ್ಯಗುರು ಲಿಂಗಾರೆಡ್ಡಿ ನಾಯಕ ತಾಯಮ್ಮ.ಎನ್ ವಿದ್ಯಾರ್ಥಿನಿಗೆ ಸನ್ಮಾನಿಸಿ ಮಾತನಾಡಿ, ತಂತ್ರಜ್ಞಾನದಲ್ಲಿ ಪ್ರಗತಿಯನ್ನು ಸಾಧಿಸಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಒಂದು ಕ್ರಾಂತಿಕಾರಿ ಸಾಧನವಾಗಿದೆ. ಇದರ ಲಾಭ ಹಾಗೂ ಕಾಳಜಿಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಭವಿಷ್ಯದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸಾಮಾಜಿಕ ಒಳಿತಿಗಾಗಿ ಉಪಯೋಗಿಸಬೇಕು. ಇದರ ಜೊತೆಗೆ ಕೆಲವು ಸವಾಲು ಮತ್ತು ಸಮಸ್ಯೆಗಳಿವೆ. ಇವುಗಳನ್ನು ನಿವಾರಿಸಲು ಸಾರ್ವಜನಿಕರು ಸಹಕರಿಸಬೇಕು ಎಂಬುವುದನ್ನು ಇಟ್ಟುಕೊಂಡು ಶಾಲೆಯ ವಿಜ್ಞಾನ ಶಿಕ್ಷಕ ರಾಚಯ್ಯ ಸ್ವಾಮಿ ಬಾಡಿಯಾಲ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿ ತಾಯಮ್ಮ ವಿಷಯ ಮಂಡನೆ ಮಾಡಿ ಪ್ರಥಮ ಸ್ಥಾನ ಪಡೆದಿರುವುದು ಸಂಸ್ಥೆಯ ಮಹತ್ವ ಹೆಚ್ಚಾಗುವಂತೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಇವರದಾಗಲಿ ಎಂದು ಹೇಳಿದರು.