ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ, ಕ್ರಮಕ್ಕೆ ಸಿದ್ದ
ಕೋಲಾರ,,ಜೂ೨೫- ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು ೨.೫೦ ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು
ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.