ತುರ್ತು ಪರಿಸ್ಥಿತಿ ಹೇರಿದ್ದವರು ಕ್ಷಮೆ ಕೇಳಲಿ: ಎಲ್.ನಾಗೇಂದ್ರ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.25:- ತುರ್ತು ಪರಿಸ್ಥಿತಿ ಹೇರಿದ್ದಕ್ಕೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಆಗ್ರಹಿಸಿದರು.
ನಗರದÀ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ತಮ್ಮ ಲೋಕಸಭಾ ಸದಸ್ಯತ್ವ ಉಳಿಸಿಕೊಳ್ಳುವ ಸಲುವಾಗಿ ತುರ್ತು ಪರಿಸ್ಥಿತಿ ಹೇರಿದ್ದಾರೆ. ಅಲ್ಲದೆ, ಸಂವಿಧಾನಕ್ಕೆ ತಿದ್ದುಪಡಿ ತಂದಿದ್ದಾರೆ ಎಂದರು.
ತುರ್ತು ಪರಿಸ್ಥಿತಿ ಹೇರಿದ ಕಾರಣಕ್ಕಾಗಿ ಇಂದಿರಾ ಗಾಂಧಿ ಅವರನ್ನು ಜನ ಸೋಲಿಸಿದರು. ಹೀಗಾಗಿ, ಅಜ್ಜಿ ಮಾಡಿದ ತಪ್ಪಿಗಾಗಿ ಅವರ ಮೊಮ್ಮಗ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೇ ಸಂವಿಧಾನ ಬದಲಾಯಿಸುತ್ತಾರೆ. ಮೀಸಲಾತಿ ತೆಗೆದು ಹಾಕುತ್ತಾರೆಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡಿದೆ. ರಾಜ್ಯದಲ್ಲಿ ಒಂದೆಡೆ ಗ್ಯಾರಂಟಿ ಯೋಜನೆ ನೀಡಿ, ಬೆಲೆ ಏರಿಕೆ ಮಾಡುತ್ತಿದ್ದಾರೆ. ಆದರೆ, ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಅವರು ಆರೋಪಿಸಿದರು.
ಇಂದು ಸಂವಾದ ಕಾರ್ಯಕ್ರಮ: ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವತಿಯಿಂದ ತುರ್ತು ಪರಿಸ್ಥಿತಿ ಸಂವಿಧಾನಕ್ಕೆ ಮಾಡಿದ ಅಪಚಾರ ಕುರಿತು ಸಂವಾದ ಕಾರ್ಯಕ್ರಮವನ್ನು ಜೂ.25ರ ಸಂಜೆ 5 ಗಂಟೆಗೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದು, ಶಾಸಕರಾದ ವಿ.ಸುನಿಲ್ ಕುಮಾರ್, ಪಿ.ರಾಜೀವ್, ಭೈರತಿ ಬಸವರಾಜ್, ಪೆÇ್ರ.ಕೆ.ಸಿ.ಬಸವರಾಜ್ ಭಾಗವಹಿಸಿ, ತುರ್ತು ಪರಿಸ್ಥಿತಿಯ ಕರಾಳ ಮುಖದ ಬಗ್ಗೆ ತಿಳಿಕೊಡಲಿದ್ದಾರೆ. ಹೀಗಾಗಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಇದೇ ವೇಳೆ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಪೆÇೀಸ್ಟರ್ ಪ್ರದರ್ಶಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ರಘು, ಕೇಬಲ್ ಮಹೇಶ್, ಗಿರಿಧರ್, ನಗರ ಉಪಾಧ್ಯಕ್ಷ ಜೋಗಿ ಮಂಜು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಿ.ಲೋಹಿತ್, ಸಚಿನ್ ಮೊದಲಾದವರು ಇದ್ದರು.