ಯುಜಿಸಿ-ನೆಟ್ ಪರೀಕ್ಷೆ ಅಕ್ರಮ ತನಿಖೆಗೆ ಒತ್ತಾಯ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.25:- ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಿತಿಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ವತಿಯಿಂದ ನಗರದ ಮಾನಸ ಗಂಗೋತ್ರಿಯ ಎದುರಿನ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಯುಜಿಸಿ-ನೆಟ್ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗಿದೆ. ಆದರೆ, ಜೂ.19ರಂದು ಶಿಕ್ಷಣ ಸಚಿವಾಲಯ ಯುಜಿಸಿ-ನೆಟ್ 2024 ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕಾರಣ ಪರೀಕ್ಷೆ ರದ್ದುಗೊಳಿಸಿದೆ. ಎನ್‍ಟಿಎ ಪ್ರಾರಂಭವಾದಾಗಿನಿಂದ ಪ್ರಮುಖ ಪರೀಕ್ಷೆಗಳ ಗಂಭೀರ ಅವ್ಯವಹಾರಗಳು ನಡೆಯುತ್ತಿವೆ.
ಅಂತಹ ಎನ್‍ಟಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ಬಗ್ಗೆ ಪಾರದರ್ಶಕ ಮತ್ತು ನಿಸ್ಪಕ್ಷಪಾತ ತನಿಖೆಗೆ ಈ ಪ್ರಕರಣವನ್ನು ಸುಪ್ರೀಂ ಕೋರ್ಟಿನ ನ್ಯಾಯಾಧೀಶರ ಸಮಿತಿ ರಚನೆ ಮಾಡಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಜೂ.4ರಂದು ಬಿಡುಗಡೆಯಾದ ನೀಟ್ ಫಲಿತಾಂಶದಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಒಂದೇ ಕೇಂದ್ರದ ಸತತ ರೋಲ್ ಸಂಖ್ಯೆ ಹೊಂದಿರುವ ವಿದ್ಯಾರ್ಥಿಗಳು 720ಕ್ಕೆ 720 ಅಂಕ ಪಡೆದಿದ್ದಾರೆ. ಇದು ಹಲವಾರು ಅನುಮಾನಕ್ಕೆ ಕಾರಣವಾಗಿದೆ. ಆ ವಿದ್ಯಾರ್ಥಿಗಳು ಒಂದೇ ಖಾಸಗಿ ಕೋಚಿಂಗ್ ಸೆಂಟರ್‍ಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಇದರಿಂದ ವೈದ್ಯಕೀಯ ಕ್ಷೇತ್ರದ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅಲ್ಲದೇ 1563 ವಿದ್ಯಾರ್ಥಿಗಳಿಗೆ ಗ್ರೇಸ್ ಮಾಕ್ರ್ಸ್ ನೀಡಲಾಗಿದೆ. ಆದರೆ, ಈ ವರ್ಷ ಪರೀಕ್ಷೆಗೆ ಮುನ್ನ ಎನ್‍ಟಿಎ ಪ್ರಕಟಿಸುವ ಮಾರ್ಗಸೂಚಿಗಳಲ್ಲಿ ಎಲ್ಲಿಯೂ ಗ್ರೇಸ್ ಮಾಕ್ರ್ಸ್ ಬಗ್ಗೆ ಉಲ್ಲೇಖಿಸಿಲ್ಲ. ಈಗಾಗಲೇ ಸುಪ್ರೀಂ ಕೋರ್ಟ್ 1563 ಗ್ರೇಸ್ ಮಾಕ್ರ್ಸ್ ರದ್ದುಪಡಿಸಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಪಡೆಯುವ ಆಯ್ಕೆ ನೀಡಿದೆ. ಸಿಎಸ್‍ಐಆರ್-ನೆಟ್ ಪರೀಕ್ಷೆ 2024ಯನ್ನು ಎನ್‍ಟಿಎ ನಡೆಯುವ 12 ಗಂಟೆಗಳ ಮೊದಲ ಸಿಎಸ್‍ಐಆರ್ ನೆಟ್ ಪರೀಕ್ಷೆಯನ್ನು ಮುಂದೂಡಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಎನ್‍ಟಿಎ ವೆಬ್‍ಸೈಟ್‍ನಲ್ಲಿ ತಿಳಿಸಿದೆ. ಹೀಗಾಗಿ ಹಲವಾರು ಪರೀಕ್ಷೆಗಳನ್ನು ನಡೆಸಲು ವಿಫಲವಾಗಿರುವ ಎನ್‍ಟಿಎ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಾರಿಯಾಗಬೇಕು. ಎಲ್ಲ ರಾಷ್ಟ್ರೀಯ ಪರೀಕ್ಷೆಗಳನ್ನು ಸಂವಿಧಾನದ ಎಂಟನೇ ಶೇಡ್ಯೂಲ್‍ನಲ್ಲಿ ತಿಳಿಸಿರುವ 22 ಭಾಷೆಗಳಲ್ಲೂ ನಡೆಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆ ಕೃಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ನೈತಿಕ ಹೊಣೆ ಒತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯu,ï ಜಿಲಾಧ್ಯಧ್ಯಕ್ಷವ ಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಅಭಿ.ಡಿ, ಮುಖಂಡರಾದ ಚಿರಾಗ್.ಎಸ್.ಕೆ, ಪ್ರಜ್ವಲ್, ಮೇಘಶ್ರೀ, ಭರತ್ ಸೇರಿದಂತೆ ಹಲವರು ಭಾಗವಹಿಸಿದ್ದರು.